ಆದರ್ಶ ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರವೇಶಕ್ಕೆ ಅರ್ಜಿಗಳ ಆಹ್ವಾನ
ಬಾಗೇಪಲ್ಲಿ: ತಾಲ್ಲೂಕಿನ ದೇವರಗುಡಿಪಲ್ಲಿ ಆದರ್ಶ ವಿದ್ಯಾಲಯದಲ್ಲಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲ ನಂಜಿರೆಡ್ಡಿ ತಿಳಿಸಿದ್ದಾರೆ.
ತಾಲ್ಲೂಕಿನ ಕಸಬಾ ಹೋಬಳಿ ದೇವರಗುಡಿಪಲ್ಲಿ ಗ್ರಾಮದ ಬಳಿಯಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿಗೆ 40 ವಿದ್ಯಾರ್ಥಿಗಳು. ಪಿಸಿಎಂಸಿಎಸ್ಗೆ 40 ವಿದ್ಯಾರ್ಥಿಗಳು ಒಟ್ಟು 80 ವಿದ್ಯಾರ್ಥಿಗಳು ಮತ್ತು ಇಬಿಎಸಿಎಸ್ಗೆ 80 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪಡೆಯಲು ಅವಕಾಶವಿದೆ. ನಮ್ಮ ವಿದ್ಯಾಲಯದಲ್ಲಿ ಅತ್ಯಾಧುನಿಕ ಲ್ಯಾಬ್ಗಳು, ಡಿಜಿಟಲ್ ಗ್ರಂಥಾಲಯ, ನುರಿತ ಉಪನ್ಯಾಸಕರು, ಸಿಇಟಿ, ಜೆಇಇ, ಮತ್ತು ನೀಟ್ ಕೋಚಿಂಗ್ ಉಚಿತವಾಗಿ ನೀಡಲಾಗುವುದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9900302257 ಮೊಬೈಲ್ ನಂಬರ್ಗೆ ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
