ಇತಿಹಾಸ ಪ್ರಸಿದ್ಧ ಪೆದ್ದಪಲ್ಲಿ ಗಂಗಮ್ಮ ಜಾತ್ರೆ ಅದ್ದೂರಿಯಾಗಿ ನಡೆಯಿತು

Feb 4, 2026 - 08:48
 0  19
ಇತಿಹಾಸ ಪ್ರಸಿದ್ಧ ಪೆದ್ದಪಲ್ಲಿ ಗಂಗಮ್ಮ ಜಾತ್ರೆ ಅದ್ದೂರಿಯಾಗಿ  ನಡೆಯಿತು

ಕೆಜಿಎಫ್: ನಗರದ ಪೆದ್ದಪಲ್ಲಿ ಗ್ರಾಮದಲ್ಲಿ ನೆಲಗೊಂಡಿರುವ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ಗಂಗಮ್ಮದೇವಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.

ದೇವಾಲಯ ಮುಜರಾಯಿ ಇಲಾಖೆಗೆ ಸೇರಿರುವುದರಿಂದ ಘನ ಸರ್ಕಾರದಿಂದ ರಥೋತ್ಸವಕ್ಕೆ ಅಧಿಕಾರಿಗಳು ಚಾಲನೆ ನೀಡಿದರು. 

ದೇವಾಲಯದಲ್ಲಿ ಬೆಳಗ್ಗೆಯಿಂದ ತಬ್ಬಿಟ್ಟು ದೀಪಗಳನ್ನು ಭಕ್ತಾದಿಗಳು ಬೆಳಗಿಸಿದರು. 

ದೇವರ ಮೂಲ ವಿಗ್ರಹಕ್ಕೆ ವಿಶೇಷವಾದ ಹೂಗಳಿಂದ ಅಲಂಕಾರವನ್ನು ಮಾಡಲಾಗಿತ್ತು. ದೇವರ ದರ್ಶನ ಪಡೆಯಲು ಆಂಧ್ರ. ತಮಿಳ್ ನಾಡು. ಕರ್ನಾಟಕದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು. ರಥೋತ್ಸವಕ್ಕೆ ಭಕ್ತಾದಿಗಳು ದವನ. ಉಪ್ಪು. ಬಾಳೆಹಣ್ಣು . ಮೆಣಸು. ಎಸೆದು ಭಕ್ತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಾಲಯ ಆಡಳಿತ ಮಂಡಳಿ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳಾದ ಉಪ. ತಹಶೀಲ್ದಾರ್. ಮಂಜುನಾಥ್. ಆರ್ ಐ. ಚಂದ್ರಮೋಹನ್. ವಿ ಎ. ವಿನೋತ್. ಸರ್ಕಲ್ ಇನ್ಸ್ಪೆಕ್ಟರ್ ಗಳಾದ. ಮಾರ್ಕುಂಡಯ್ಯ. ನವೀನ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456