ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾಗಿ ಡಾ. ಜಿ. ಪರಮೇಶ್ವರ್ ಆಯ್ಕೆ: ಬಲಗೈ ಸಮುದಾಯದಿಂದ ಅಭಿನಂದನೆ
ಕೆಜಿಎಫ್: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾಗಿ ಡಾ. ಜಿ. ಪರಮೇಶ್ವರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಲಗೈ ಸಮುದಾಯದ ಮುಖಂಡರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಸಮುದಾಯದ ಮುಖಂಡರು ಮಾತನಾಡಿ, ಡಾ. ಪರಮೇಶ್ವರ್ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ನಾಯಕರಾಗಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕಂದಾಯ ಇಲಾಖೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ರೈತರು, ಬಡವರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆಶಿಸಿದರು.
ಬಲಗೈ ಸಮುದಾಯದ ಸದಸ್ಯರು ಡಾ. ಪರಮೇಶ್ವರ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಲಗೈ ಸಮುದಾಯದ ಮುಖಂಡರಾದ ಮಧು ಕುಮಾರ್ ಅಂಜಿನಪ್ಪ ಸಾಮ್ರಾಟ್ ಕೃಷ್ಣಮೂರ್ತಿ ವೆಂಕಟೇಶ್ ಸೋಮಶೇಖರ್ ಸುನಿಲ್ ಕುಮಾರ್ ಶ್ರೀರಾಮ್ ರಾಧಾಕೃಷ್ಣ ಶಿವ ಹರೀಶ್ ಸೇರಿದಂತೆ ಉಪಸ್ಥಿತರಿದ್ದರು
What's Your Reaction?