ಐಸಂದ್ರ ಮಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತದ ವಿರುದ್ಧ ಗ್ರಾಮಸ್ಥರ ಅಸಮಾಧಾನ

May 31, 2026 - 13:28
 0  28
ಐಸಂದ್ರ ಮಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತದ ವಿರುದ್ಧ ಗ್ರಾಮಸ್ಥರ ಅಸಮಾಧಾನ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೇತಮಂಗಲ: ಇಲ್ಲಿಗೆ ಸಮೀಪದ ಟಿ ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಐಸಂದ್ರ ಮಿಟ್ಟೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಸಮರ್ಪಕವಾಗಿ ನಡೆಯುತ್ತಿಲ್ಲ ಸಂಘದ ವತಿಯಿಂದ ಸದಸ್ಯರಿಗೆ ಹಾಗೂ ಹಾಲು ಉತ್ಪಾದಕರಿಗೆ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಮತ್ತು ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಗ್ರಾಮಸ್ಥರ ಗಂಭೀರವಾಗಿ ಆರೋಪಿಸಿದರು.

ಈ ವೇಳೆ ಗ್ರಾಮಸ್ಥರು ಸುದ್ದಿಗಾರರೊಂದಿಗೆ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ್ಯಚಟುವಟಿಕೆಗಳಲ್ಲಿ ಪಾರದರ್ಶಕತೆ ಕೊರತೆಯಿದ್ದು, ಹಾಲು ಉತ್ಪಾದಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಅಧಿಕಾರಿಗಳು ಹಾಲು ಉತ್ಪಾದಕರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ಷೇರುದಾರರ ಗಮನಕ್ಕೆ ತರದೇ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಷೇರುದಾರರು ಆಡಳಿತ ಮಂಡಳಿ ವಿರುದ್ಧ ಪ್ರಶ್ನೆ ಮಾಡಿದರೆ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ದೊರೆಯುವ ಯಾವುದೇ ಸೌಲತ್ತುಗಳ್ನನು ಷೇರುದಾರರಿಗೆ ಹಾಗೂ ಗ್ರಾಮಸ್ಥರಿಗೆ ತಲುಪುತಿಲ್ಲ, ಆದುದರಿಂದ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಐಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೂಡಲೇ ಆಡಳಿತ ವರ್ಗದವರನ್ನು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದರು. 

ಆಡಳಿತ ಮಂಡಳಿಯನ್ನು ಬದಲಾವಣೆ ಮಾಡಿ ಕೂಡಲೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಐಸಂದ್ರ ಮಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಆಡಳಿತ ಮಂಡಳಿಯನ್ನು ಬದಲಾವಣೆ ಮಾಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಮಹಿಳೆಯರು ಇದ್ದರು.

What's Your Reaction?

like

dislike

love

funny

angry

sad

wow

suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268 , 9686665456 #suddikiranatv #suddikiranaott