ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳ ಪರಿಚಯವೇ; "ಕನ್ನಡ ರಥವೇರಿದ ರತ್ನಗಳು"

Jan 16, 2026 - 13:21
 0  12
ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳ ಪರಿಚಯವೇ; "ಕನ್ನಡ ರಥವೇರಿದ ರತ್ನಗಳು"

    ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ 1915 ರಲ್ಲಿ ಸ್ಥಾಪನೆಯಾಯಿತು. ಅಂದಿನಿಂದಲೂ ಇಂದಿನವರೆಗೆ, ಅಂದರೆ 2025 ರವರೆಗೆ, ಈ 110 ವರ್ಷಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 87 ಸಮ್ಮೇಳನಗಳನ್ನು ನಡೆಸಿದೆ.

 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲ ಉದ್ದೇಶ ಕನ್ನಡ ಭಾಷೆಗೆ ಸಾರ್ವಭೌಮ ಸ್ಥಾನ, ನೆಲ, ಜಲ, ಭಾಷೆ ವಿಷಯದಲ್ಲಿ ಅವಿರತವಾಗಿ ದುಡಿದ ಮಹನೀಯರನ್ನು, ಸಾಹಿತಿಗಳನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವುದಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸಂಗೀತವನ್ನು ಸಂರಕ್ಷಿಸುವ ಮತ್ತು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಈ ಸಮ್ಮೇಳನಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. 

ಮೈಸೂರಿನ ಹಂಗಾಮಿ ದಿವಾನರಾಗಿದ್ದ  ಹೆಚ್.ವಿ. ನಂಜುಂಡಯ್ಯ ಅವರು ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕ ಮತ್ತು ಮೊದಲ ಕುಲಪತಿ, ಮೈಸೂರು ರಾಜ್ಯ ಹೈಕೋರ್ಟಿನ ಹಿರಿಯ ನ್ಯಾಯಾಧೀಶರು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಮೊದಲ ಅಧ್ಯಕ್ಷರಾಗಿದ್ದರು. ಇವರು 1915 ರಿಂದ 1917 ರವರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆದ ಒಂದು, ಎರಡು ಮತ್ತು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 

 1974ರಲ್ಲಿ ಮಂಡ್ಯದಲ್ಲಿ ನಡೆದ 48ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಜಯದೇವಿತಾಯಿ ಲಿಗಾಡೆ ಮೊದಲ ಮಹಿಳಾ ಅಧ್ಯಕ್ಷರಾಗಿದ್ದರು.

 87 ಸಮ್ಮೇಳನಗಳಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹನೀಯರ ಕಿರುಪರಿಚಯವನ್ನು ಈ ಕೃತಿ ನಮಗೆ ಒದಗಿಸುತ್ತದೆ. ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ  ಅವರು ಸಾಹಿತ್ಯದಲ್ಲಿ ಮಾಡಿದ ಕ ಕೃಷಿಯ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಈ ಕೃತಿಯಲ್ಲಿ ಒದಗಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಬಗೆಗೆ ತಿಳಿದುಕೊಳ್ಳಲು ಓದುಗರಿಗೆ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಇದೊಂದು ಮಾರ್ಗದರ್ಶನ ಕೈಪಿಡಿಯಂತೆ ಮೂಡಿಬಂದಿದೆ. ಸಮ್ಮೇಳನ ಅಧ್ಯಕ್ಷರ ಕೃತಿಗಳನ್ನು ಮತ್ತು ಅವರ ಪಡೆದ ಪ್ರಶಸ್ತಿಗಳನ್ನು ಅವರು ನಡೆದು ಬಂದ ದಾರಿಯನ್ನು ಮತ್ತು ಸಮ್ಮೇಳನ ನಡೆದ ವರ್ಷ ಮತ್ತು ಸ್ಥಳಗಳನ್ನು ಈ ಕೃತಿಯಲ್ಲಿ ಲೇಖಕರಾದ ನಿಡಸಾಲೆ ಪುಟ್ಟಸ್ವಾಮಯ್ಯನವರು ಕಟ್ಟಿಕೊಟ್ಟಿದ್ದಾರೆ. ಇಂತಹ ಉತ್ತಮ ಕೃತಿಯನ್ನು ರಚಿಸಿದ ಶ್ರೀ ನಿಡಸಾಲೆ  ಪುಟ್ಟಸ್ವಾಮಯ್ಯನವರು ಕನ್ನಡಿಗರ ಕೃತಜ್ಞತೆಗೆ ಪಾತ್ರರಾಗಿದ್ದಾರೆ. 

ಉದಂತ ಶಿವಕುಮಾರ್
ಲೇಖಕರು, ಬೆಂಗಳೂರು-560056
ಮೊ:9739758558

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 1
Sad Sad 1
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456