ಕಾಂಗ್ರೆಸ್ ಸರಕಾರದ ವಿರುದ್ಧ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರಕಾರದ ವಿರುದ್ಧ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ

Feb 8, 2024 - 11:47
 0  1
ಕಾಂಗ್ರೆಸ್ ಸರಕಾರದ ವಿರುದ್ಧ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನೇತೃತ್ವ ವಹಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಸಿದ್ದರಾಮಯ್ಯರ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರಾಜ್ಯದ ರೈತರನ್ನು ಕಣ್ಣೀರು ಹಾಕಿಸುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಲಾಯಿತು.

What's Your Reaction?

like

dislike

love

funny

angry

sad

wow