ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ, ನ್ಯಾಯಾಧಿಶರಾದ ಕೃಪಾ ಕರೆ 

ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ, ನ್ಯಾಯಾಧಿಶರಾದ ಕೃಪಾ ಕರೆ 

ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ, ತಂಬಾಕು ಮುಕ್ತ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಜನ ಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಲು ನ್ಯಾಯಾಧಿಶರಾದ ಕೃಪಾ ಕರೆ ನೀಡಿದರು ..

ಕಾರ್ಮಿಕರು ಈ ರಾಷ್ಟ್ರದ ಸಂಪತ್ತು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮದ ದುಡಿಮೆಯು ಅಪಾರವಾಗಿದೆ ಎಂದು ಕೃಷ್ಣರಾಜಪೇಟೆ ಜೆಎಂಎಫ್ ಸಿ ಸಿವಿಲ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ. ಎಲ್. ಕೃಪಾ ಹೇಳಿದರು.
ಅವರು ಇಂದು ಕೃಷ್ಣರಾಜಪೇಟೆ ಪಟ್ಟಣದ ಆಚಾರ್ಯ ವಿದ್ಯಾ ಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ವಿಶ್ವ ತಂಬಾಕು ರಹಿತ ದಿನ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕೈಗಾರಿಕೆಗಳು, ಕಟ್ಟಡಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಮ್ಮ ಜೀವದ ಹಂಗು ತೊರೆದು ದುಡಿಯುತ್ತಿರುವ ಕಾರ್ಮಿಕರು ತಮ್ಮ ವಯಕ್ತಿಕ ಜೀವನದ ಕಡೆಗೂ ಗಮನ ಹರಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡು ನೆಮ್ಮದಿಯ ಬದುಕು ನಡೆಸಬೇಕು ಎಂದು ಕಿವಿ ಮಾತು ಹೇಳಿದ ನ್ಯಾಯಾಧೀಶರು ಕಾರ್ಮಿಕ ಬಂಧುಗಳು ತಮ್ಮ ಮಕ್ಕಳನ್ನು ದುಡಿಮೆಗೆ ಬಳಸಿಕೊಂಡು ಅವರ ಉಜ್ವಲವಾದ ಭವಿಷ್ಯವನ್ನು ಹಾಳು ಮಾಡದೇ ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಾಧನೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಅಪರ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ಮಾತನಾಡಿ ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳನ್ನು ಬಳಸುತ್ತಿರುವುದರಿಂದ ನಾವು ನಮ್ಮ ಅಮೂಲ್ಯವಾದ ಆರೋಗ್ಯವನ್ನು ಹಾಳುಮಾಡಿ ಕೊಳ್ಳುತ್ತಿರುವುದಲ್ಲದೆ, ಅಪಾಯಕಾರಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಅಕಾಲಿಕವಾಗಿ ಸಾವಿಗೆ ಸಿಲುಕಿ ನಮ್ಮನ್ನು ನಂಬಿದವರನ್ನು ಅರ್ಧ ದಾರಿಯಲ್ಲಿ ಕೈಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದೇವೆ. ಆದ್ದರಿಂದ ನಾಗರಿಕ ಸಮಾಜದಲ್ಲಿ ವಾಸಮಾಡುತ್ತಿರುವ ನಾವೆಲ್ಲರೂ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕನ್ನು ಬಳಸುವುದಿಲ್ಲವೆಂದು ಶಪಥ ಮಾಡಬೇಕು ಎಂದು ಮನವಿ ಮಾಡಿದ ಅವರು ಕಾರ್ಮಿಕ ಬಂಧುಗಳು ಕೂಡ ತಮಗೆ ಸಂವಿಧಾನ ಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ಬಳಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಕರೆ ನೀಡಿದರು. ಇದೆ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರಿಗೆ ತಂಬಾಕು ಜಾಗೃತಿ ಕುರಿತು ಪ್ರತಿಜ್ಞಾ ವಿಧಿಯನ್ನು ನ್ಯಾಯಾಧೀಶೆ ಕೃಪಾ ಭೋದಿಸಿದರು.
ಸರ್ಕಾರಿ ಅಭಿಯೋಜಕ ಶಿವಪ್ಪ, ಹಿರಿಯ ವಕೀಲ ಹೆಚ್.ರವಿ, ಕೆ.ಎನ್.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ರಾಜೇಗೌಡ, ಕಾರ್ಮಿಕ ನಿರೀಕ್ಷಕ ಗಂಗಾಧರ, ಸಂಪನ್ಮೂಲ ವ್ಯಕ್ತಿಗಳಾದ ನೀಲಾಮಣಿ, ಜ್ಞಾನೇಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಚಾರ್ಯ ಶಾಲೆಯ ಮುಖ್ಯ ಶಿಕ್ಷಕಿ ಹುಧಾ ಫಾತಿಮಾ ಡೆಲ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ವ ಕಾರ್ಮಿಕ ದಿನಾಚರಣೆ ಮತ್ತು ವಿಶ್ವ ತಂಬಾಕು ವಿರೋಧಿ ದಿನ ಕುರಿತು ಮಾತನಾಡಿದರು.

ಶಿಕ್ಷಕರಾದ ನಟೇಶ್ ಕಾರ್ಯಕ್ರಮ ನಿರೂಪಿಸಿದರೆ ಶಿಕ್ಷಕಿ ಗೀತಾ ಪ್ರಾರ್ಥಿಸಿದರು. ಶಾಲಾಮಕ್ಕಳ ಶಿಸ್ತು ಬದ್ಧ ಸ್ವಾಗತವು ಅತಿಥಿಗಳ ಗಮನ ಸೆಳೆಯಿತು.