ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ವೆಬ್‌ಸೈಟ್ ತಂತ್ರಜ್ಞಾನ ಅತ್ಯಗತ್ಯ: ಕುಲಪತಿ ಪ್ರೊ. ಬಿ.ಕೆ. ರವಿ

Mar 12, 2026 - 16:05
 0  4
ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ವೆಬ್‌ಸೈಟ್ ತಂತ್ರಜ್ಞಾನ ಅತ್ಯಗತ್ಯ: ಕುಲಪತಿ ಪ್ರೊ. ಬಿ.ಕೆ. ರವಿ
    ಕೆಜಿಎಫ್ : ಕೆಜಿಎಫ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಎಂ ಉಷಾ ಯೋಜನೆ ಹಾಗೂ ಸೆಂಟರ್ ಆಫ್ ಇ -ಗವರ್ನನ್ಸ್ ಸಂಯುಕ್ತ ಆಶ್ರಯದಲ್ಲಿ ನಡೆದ ವೆಬ್ ಸೈಟ್ ಡಿಸೈನಿಂಗ್ ಎಂಬ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಗಿತ್ತು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊಫೆಸರ್ ಬಿಕೆ ರವಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು,  ಸರ್ಕಾರಿ ಕಾಲೇಜುಗಳ ಸರ್ವಾಂಗಿನ ಅಭಿವೃದ್ಧಿಗೆ ವೆಬ್ಸೈಟ್ ತಂತ್ರಜ್ಞಾನ ಅತ್ಯಂತ ಅವಶ್ಯಕವೆಂದು ಅಭಿಪ್ರಾಯಪಟ್ಟರು.

ಇಂದಿನ ಡಿಜಿಟಲ್ ಯುಗದಲ್ಲಿ ಶೈಕ್ಷಣಿಕ ಸಂಸ್ಥೆಗಳ ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗೆ ಸುಸಜ್ಜಿತ ವೆಬ್‌ಸೈಟ್ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಅತ್ಯವಶ್ಯಕ ಎಂದು ಕುಲಪತಿ ಪ್ರೊ. ಬಿ.ಕೆ. ರವಿ ಅವರು ಪ್ರತಿಪಾದಿಸಿದರು.



 ಕಾಲೇಜು ಶಿಕ್ಷಣ ಇಲಾಖೆಯ ಈ ರೀತಿಯ ಒಂದು ಕಾರ್ಯಕ್ರಮವನ್ನು ರೂಪಿಸಿ ಬೆಂಗಳೂರು ನಗರ ಗ್ರಾಮಾಂತರ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಐಟಿ ಕೋ ಆರ್ಡಿನೇಟರ್ಸ್ ಗಳಿಗೆ ತರಬೇತಿಯನ್ನು ಕೆಜಿಎಫ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿರುವುದು ಬಹಳ ಸಂತೋಷವನ್ನುಂಟು ಮಾಡಿದೆ ಎಂದರು.

 ಕರ್ನಾಟಕದ ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರು ಅತ್ಯಂತ ಕೌಶಲ್ಯ ಹಾಗೂ ನುರಿತವರಾಗಿರುವುದರಿಂದ ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಡೆದು ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾಕ್ಟರ್ ಕೆ ನಾರಾಯಣ್,  ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ಮಾಹಿತಿ ತಂತ್ರಜ್ಞಾನ  ಅಧಿಕಾರಿ ಡಾಕ್ಟರ್ ನಂದಿತಾ ಪ್ರಸಾದ್, ಶ್ರೀ ವಿಜಯ ಮಹಾಂತೇಶ್, ಸಂಪನ್ಮೂಲ ವ್ಯಕ್ತಿಗಳಾದ ರೋಹಿತ್, ಪವಿತ್ರ ಶಮಂತ್, ಪಿಎಂ ಉಷಾ  ಸಂಯೋಜಕರಾದ  ಡಾಕ್ಟರ್ ವೆಂಕಟೇಶ್ ಸದಸ್ಯರಾದ ಶ್ರೀನಿವಾಸ್ ಮೂರ್ತಿ ಬಾಬುಪ್ರಸಾದ್ ಸುಮತಿ ಭಾಸ್ಕರ್ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456