ಕಿಕ್ಕೇರಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಛೇರಿಯಲ್ಲಿ ಆಯುಧಪೂಜೆ ಲಕ್ಷ್ಮೀ ಪೂಜಾ ಮಹೋತ್ಸವ
ಕಿಕ್ಕೇರಿ: ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಯೋಜನಾಧಿಕಾರಿ ಶ್ರೀನಿವಾಸ್ ಮಾತನಾಡಿ, ಆಯುಧ ಪೂಜೆ ಮತ್ತು ಲಕ್ಷ್ಮೀ ಪೂಜೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯದ ಪ್ರತೀಕಗಳಾಗಿವೆ. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ನಿರ್ವಹಿಸಲು ಬಳಸುವ ಸಾಧನಗಳನ್ನು ಗೌರವಿಸುವುದರ ಜೊತೆಗೆ, ನಾಡಿನ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ದೇವರಲ್ಲಿ ಪ್ರಾರ್ಥಿಸುವುದು ನಮ್ಮ ಸಂಪ್ರದಾಯವಾಗಿದೆ ಸಕಾಲಕ್ಕೆ ಮಳೆ-ಬೆಳೆಯಾಗಿ ರೈತರು ಉತ್ತಮ ಫಸಲು ಪಡೆದು ಸುಖ, ಶಾಂತಿ ಹಾಗೂ ಸಮೃದ್ಧಿಯಿಂದ ಜೀವನ ನಡೆಸುವಂತಾಗಲಿ
ನಾಡಿನ ಜನತೆಗೆ ಉತ್ತಮ ಆರೋಗ್ಯ, ನೆಮ್ಮದಿ ಮತ್ತು ಆರ್ಥಿಕ ಅಭಿವೃದ್ಧಿ ದೊರೆಯಲಿ ಎಂದು ಆಶಿಸಿದರು.
ನಂತರ ಅರ್ಜಕ ಸಂತೋಷ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಜನರ ಜೀವನಮಟ್ಟ ಸುಧಾರಣೆ ಹಾಗೂ ಸ್ವಾವಲಂಬಿ ಬದುಕು ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಲ್ಲರ ಬದುಕಿನಲ್ಲಿ ಸಂತೋಷ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಯೋಜಾನಾ ಅಧಿಕಾರಿ ಶ್ರೀನಿವಾಸ್ ಸಿಬ್ಬಂದಿಗಳಾದ ಚಾಮರಾಜು,ರಾಘವೇಂದ್ರ, ಸಂಗೀತಾ, ದೀನೇಶ್, ಪವಿತ್ರ, ಯಶೋದ, ರವೀಶ್, ನವೀನ್, ಚೈತ್ರ, ಸವಿತಾ, ನಂದಿನಿ, ಪ್ರವೀಣ್, ದಾಮೋಧರ್, ಶಶಿಕುಮಾರ್, ರವಿಕುಮಾರ್, ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದು, ಪೂಜಾ ಕಾರ್ಯಕ್ರಮದಲ್ಲಿ ಭಕ್ತಿಭಾವದಿಂದ ಪಾಲ್ಗೊಂಡರು.