ಕುದೇರು ಗ್ರಾಮ ಪಂಚಾಯತಿಯ  ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ 

Feb 11, 2026 - 11:42
 0  13
ಕುದೇರು ಗ್ರಾಮ ಪಂಚಾಯತಿಯ  ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ 

    ಸುದ್ದಿಕಿರಣ, ಚಾಮರಾಜನಗರ: ತಾಲೋಕಿನ ಕುದೇರು ಗ್ರಾಮ ಪಂಚಾಯತಿ ವತಿಯಿಂದ ಅವಧಿ ಮುಗಿದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.

 ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಮಾತನಾಡಿ ನಮ್ಮ ಗ್ರಾಮ ಪಂಚಾಯತಿ ಅವಧಿಯಲ್ಲಿ ಯಶಸ್ವಿಯಾಗಿ 5 ವರ್ಷ ಪೂರೈಸಿದ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಸದಸ್ಯರು ತಮ್ಮ ಅವಧಿಯಲ್ಲಿ ಪಕ್ಷಭೇದ ಮರೆತು ಒಮ್ಮತವಾಗಿ ಕಾರ್ಯನಿರ್ವಹಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿ ಸಹಕಾರ ನೀಡಿದ್ದಾರೆ ಎಂದರು.

 ಪಂಚಾಯತಿ ವ್ಯವಸ್ಥೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು ಸಾರ್ವಜನಿಕರ ಸಹಕಾರವನ್ನು ಪಡೆಯುವುದರ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡುವುದರ ಜೊತೆಗೆ ಸದಸ್ಯರ ಅವಧಿ ಮುಗಿದುಹೋಗಿದೆ ಎಂಬ ನಿರ್ಲಕ್ಷ ಮಾಡುವುದಿಲ್ಲ ಎಂದರು.

 ಈ ನನ್ನ ಮೂರು ವರ್ಷದ ಅವಧಿಯಲ್ಲಿ ಪಂಚಾಯಿತಿ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಿದ ಎಲ್ಲಾ ಸದಸ್ಯರನ್ನು ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸುದರ ಜೊತೆಗೆ ಬರುವ ದಿನಗಳಲ್ಲಿ  ಸದಸ್ಯರ ಅವಧಿ ಮುಗಿದರು ಪಂಚಾಯ್ತಿ ಅಭಿವೃದ್ಧಿಗೆ ಹೆಚ್ಚಿನ ಗಮನಕ್ಕೆ ಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶಾಲು ಹೊದಿಸಿ  ಬೀಳ್ಕೊಡುಗೆ ಮಾಡಲಾಯಿತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456