ಕೆಜಿಎಫ್ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಎಂ. ಆರ್. ರವಿ ಭೇಟಿ ಪರಿಶೀಲನೆ

ಕೆಜಿಎಫ್: ಕೆಜಿಎಫ್ ನಗರದ ತಾಲೂಕು ಕಚೇರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಎಂ. ಆರ್. ರವಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿ ನಾನು ಮೊದಲ ಬಾರಿಗೆ ಕೆಜಿಎಫ್ ತಾಲೂಕಿಗೆ ಭೇಟಿ ನೀಡಿದ್ದು, ಇಲ್ಲಿ ತಾಲೂಕು ಕಚೇರಿ ಕಟ್ಟಡ ಹೊಸದಾಗಿ ನಿರ್ಮಾಣವಾಗಿದ್ದು, ಇಲ್ಲೇ ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಡಿಜಿಟಲ್ ರೆಕಾರ್ಡ್ಸ್ ಕೊಠಡಿಯನ್ನು ವೀಕ್ಷಣೆ ಮಾಡಿದ್ದು, ಕೆಜಿಎಫ್ ನಲ್ಲಿ ವಿಶೇಷವಾಗಿ ಮಾದರಿಯಾಗಿ ಅಭಿಲೇಕಾಲಯವನ್ನು ಅಭಿವೃದ್ಧಿಪಡಿಸಬೇಕೆಂಬ ನಿಟ್ಟಿನಲ್ಲಿ ಭೇಟಿ ನೀಡಿದ್ದೇನೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಗಿರುವ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ವೀಕ್ಷಣೆ ಮಾಡಿದ್ದು ಆರು ಸಿಬ್ಬಂದಿಗಳು ಮಾತ್ರ ಕಾರ್ಯನಿರ್ವಹಿಸಿದ್ದು ಅದನ್ನು ಹೆಚ್ಚುವರಿಯಾಗಿ ಇನ್ನು ನಾಲ್ವರು ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಸೂಚಿಸಿದ್ದು, ರಾಜ್ಯದಲ್ಲೇ ಮಾದರಿ ಡಿಜಿಟಲ್ ರಿಕಾರ್ಡ್ ಅಭಿಲೇಖಾಲಯವನ್ನು ಮಾಡೋದು ನನ್ನ ಗುರಿಯಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಅತಿ ಹೆಚ್ಚು ಹಿಂದುಳಿದ ವರ್ಗದವರಿಂದ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ಸಹಕಾರ ನೀಡುತ್ತೇನೆ. ಜಾತಿ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ಕೆಜಿಎಫ್ ಕ್ಷೇತ್ರದಲ್ಲಿ ಹಲವು ದೂರುಗಳು ಬಂದಿದ್ದು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ತಾವೇ ಖುದ್ದಾಗಿ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳಬೇಕು. ಯಾರ ಮಧ್ಯವರ್ತಿಗಳ ಕೈಯಲ್ಲಿ ನಿಮ್ಮ ಕೆಲಸಗಳನ್ನು ಮಾಡಿಕೊಳ್ಳಬಾರದು ಎಂದರು. ಏನೇ ಇದ್ದರೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಧ್ಯವರ್ತಿಗಳೊಂದಿಗೆ ವ್ಯವಹರಿಸುವ ಮೂಲಕ ಸಾರ್ವಜನಿಕರಿಗೆ ಮೋಸಕ್ಕೆ ಒಳಗಾಗಬಾರದು. ಯಾವುದೇ ಕಾರಣಕ್ಕೂ ತಾಲೂಕು ಕಚೇರಿಗೆ ಕೆಟ್ಟ ಹೆಸರು ತರೋದಕ್ಕೆ ನಾವು ಬಿಡುವುದಿಲ್ಲ ಎಂದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು .ನಾಗವೇಣಿ. ಉಪ ತಹಶೀಲ್ದಾರ್. ಮಂಜುನಾಥ್ .ಆರ್ ಐ. ಚಂದ್ರಮೋಹನ್.ಕಂದಾಯ ಅಧಿಕಾರಿಗಳು ಇದ್ದರು