ಕೆಜಿಎಫ್ ನಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮ: ಆಮಂತ್ರಣ

Apr 28, 2026 - 17:12
 0  2
ಕೆಜಿಎಫ್ ನಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮ: ಆಮಂತ್ರಣ

     ಕೆಜಿಎಫ್: ಕೆಜಿಎಫ್ ನಗರದ ವೋಟ್ ಲೈನ್ ನಲ್ಲಿ ನೆಲೆಸಿರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವ ಲೋಕ ರಕ್ಷಕನಾದ ಶ್ರೀ ಲಕ್ಷ್ಮಿನರಸಿಂಹ   ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಮಹೋತ್ಸವು ಈ ಬಾರಿ ಅತ್ಯಂತ ವೈಭವದಿಂದ ಜರುಗಲಿದೆ. ಎಂದು ದೇವಾಲಯದ ಮಂಡಳಿಯವರು ತಿಳಿಸಿದರು

ದಿನಾಂಕ 29 ರಿಂದ 30 ರವರೆಗೆ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರು ಆಹ್ವಾನಿಸಿದರು. ಸಾಂಸ್ಕೃತಿಕ ಕಾರ್ಯ ಕ್ರಮಗಳು: ಭಕ್ತಿ ಭಾವದ ಜೊತೆಗೆ ಮನರಂಜನೆಗಾಗಿ ಗ್ರಾಮದ ವತಿಯಿಂದ ನಾಟಕ, ಭಜನೆ ಹಾಗೂ ಜಾನಪದ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯುತ್ ದೀಪಾಲಂಕಾರ ಸ್ವಾಮಿಯವರ ಪುಷ್ಪಪಲ್ಲಕ್ಕಿ ಬೆಳ್ಳಿ ರಥ ಹಾಗೂ ರಸಮಂಜರಿ(ಆರ್ಕೆಸ್ಟ್ರಾ) ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಪ್ರಸಾದ ವಿನಿಯೋಗ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಗಮಿಸಲಿದ್ದು ಎಲ್ಲಾ ಭಕ್ತಾದಿಗಳಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ವಾರ್ಡಿನ ನಿವಾಸಿಗಳು ಹಾಗೂ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456