ಕೆ.ಜಿ.ಎಫ್: ನಿವೃತ್ತ ಮಹಿಳಾ ಪೊಲೀಸ್ ಅಧಿಕಾರಿಗೆ ಬಿಳ್ಕೋಡುಗೆ
ಕೆಜಿಎಫ್., ಮೇ. ೧೨ :ನಿವೃತ್ತ ಮಹಿಳಾ ಪೊಲೀಸ್ ಅಧಿಕಾರಿಗೆ ಹಾರ್ಥಿಕ ಬಿಳ್ಕೋಡುಗೆ ಕಾರ್ಯಕ್ರಮವು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸೋಮವಾರದಂದು ನಡೆಯಿತು.
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯ ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಆಗಿದ್ದ ಎಲ್.ಕಮಲಾಕ್ಷಿ ಅವರು ಏ.೩೦ ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಪ್ರಯುಕ್ತ ಅವರಿಗೆ ಸೋಮವಾರದಂದು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಡಿಸಿದ್ದ, ಹಾರ್ಥಿಕ ಬಿಳ್ಕೋಡುಗೆ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಅಧ್ಯಕ್ಷತೆ ವಹಿಸಿ ನಿವೃತ್ತ ಮಹಿಳಾ ಪೊಲೀಸ್ ಅಧಿಕಾರಿಯ ವಿಶ್ರಾಂತಿ ಜೀವನಕ್ಕೆ ಶುಭ ಕೋರಿದರು.
ನಿವೃತ್ತರಾದ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಎಲ್.ಕಮಲಾಕ್ಷಿ ಅವರನ್ನು ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಸನ್ಮಾನಿಸಿ, ಸೇವಾ ಪ್ರಮಾಣಪತ್ರ, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಿವೈಎಸ್ಪಿ ಎಸ್.ಪಾಂಡುರಂಗ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಶಾಖಾಧೀಕ್ಷಕರಾದ ವಿ.ಗಿರೀಶ್, ಎ.ನಜೀಮಾಬಾನು, ಜಿಲ್ಲಾ ಪೊಲೀಸ್ ಕಛೇರಿಯ ವಿ.ಮಂಜುನಾಥ, ಬಿ.ಸಂಗೀತಾ, ಭವಿತಾಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
*ಚಿತ್ರಶಿರ್ಷಿಕೆ: ೧೨ಕೆಜಿಎಫ್೦೧: ನಿವೃತ್ತ ಮಹಿಳಾ ಪೊಲೀಸ್ ಅಧಿಕಾರಿ ಎಲ್.ಕಮಲಾಕ್ಷಿ ಅವರನ್ನು ಸನ್ಮಾನಿಸಿದ ಎಸ್ಪಿ ಕೆ.ಎಂ.ಶಾಂತರಾಜು, ಡಿವೈಎಸ್ಪಿ ಎಸ್.ಪಾಂಡುರಂಗ, ಎಎಓ ಜಿ.ವಿಶ್ವನಾಥ ಮತ್ತಿತರರು*
What's Your Reaction?
Like
1
Dislike
0
Love
0
Funny
1
Angry
0
Sad
0
Wow
0
