ಕೆಜಿಎಫ್ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಸ್ವಾತಿ ನಕ್ಷತ್ರ ಪೂಜೆ
ಪೌರ್ಣಮಿ ಪೂಜೆ : ಜೂನ್ 10, ಮಂಗಳವಾರದಂದು ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪಕ್ಕದಲ್ಲೇ ಇರುವ ತಿರುವೆಂಗಡ ಮುಡಯನ್, ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೌರ್ಣಮಿ ಪೂಜೆಯನ್ನು ಏರ್ಪಡಿಸಲಾಗಿದೆ. ಪದ್ಧತಿಯಂತೆ ಬೆಳಿಗ್ಗೆ ಸುಪ್ರಭಾತ, ವಿಷ್ಣುಸಹಸ್ರನಾಮ ಪಠಣ, ನಂತರ ಹೋಮ, ಅಭಿಷೇಕ ಮುಂತಾದ ಪೂಜಾ ವಿಧಿವಿಧಾನಗಳು ನಡೆಯಲಿವೆ. ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆಯುವಂತೆ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಮಹೇಂದ್ರನ್ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
