ಕೆಜಿಎಫ್: 11 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ರೂಪಕಲಾ ಶಶಿಧರ್ ಚಾಲನೆ
ಕೆಜಿಎಫ್: ನಗರದ ಹೊರವಲಯದ ಸ್ಕೂಲ್ ಆಫ್ ಮೈನ್ಸ್ನಿಂದ ಕೃಷ್ಣವರಂವರೆಗಿನ ರಸ್ತೆ ಅಭಿವೃದ್ಧಿ, ನೂತನ ಸೇತುವೆ ನಿರ್ಮಾಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೆ ಶಾಸಕಿ ರೂಪಕಲಾ ಶಶಿಧರ್ ಅವರು ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಿದರು.
ಸುಮಾರು 11 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಸಾರ್ವಜನಿಕರ ದಶಕಗಳ ಬೇಡಿಕೆಗೆ ಕೊನೆಗೂ ಚಾಲನೆ ಸಿಕ್ಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಈ ರಸ್ತೆಯಲ್ಲಿ ಪ್ರಮುಖ ಕಾಲೇಜು ಹಾಗೂ ಎರಡು ಸ್ಮಶಾನಗಳಿರುವುದರಿಂದ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟ ಅತಿಯಾಗಿದೆ. ರಸ್ತೆ ಸರಿಯಿಲ್ಲದ ಕಾರಣ ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಈ ಎಲ್ಲಾ ಸಮಸ್ಯೆಗಳನ್ನು ಮನಗಂಡು, ಸುಸಜ್ಜಿತ ರಸ್ತೆ ಹಾಗೂ ಸಂಚಾರ ಸುರಕ್ಷತೆಗಾಗಿ ರಸ್ತೆಯ ಉದ್ದಕ್ಕೂ ವಿದ್ಯುತ್ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿರುವ ಶಾಸಕರು, ಮುಂದಿನ ಮೂರು ತಿಂಗಳ ಒಳಗಾಗಿ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು, ಕಾಮಗಾರಿ ಗುತ್ತಿಗೆದಾರರು, ಸ್ಥಳೀಯ ಮುಖಂಡರು ಹಾಗೂ ಕೃಷ್ಣವರಂ ಭಾಗದ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
