ಕೆನರಾ ಬ್ಯಾಂಕ್ ನೌಕರರ ಸಂಘದಿಂದ ರಕ್ತದಾನ ಶಿಬಿರ

Apr 15, 2026 - 16:02
 0  2
ಕೆನರಾ ಬ್ಯಾಂಕ್ ನೌಕರರ ಸಂಘದಿಂದ ರಕ್ತದಾನ ಶಿಬಿರ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಮುಖ್ಯಾಂಶಗಳು:

ಕೆನರಾ ಬ್ಯಾಂಕ್ ನೌಕರರ ಸಂಘದ ಅಮೃತ ಮಹೋತ್ಸವದ ಅಂಗವಾಗಿ 75 ದಾನಿಗಳಿಂದ ರಕ್ತದಾನ ಶಿಬಿರ....

ಎಂ.ಎಸ್.ಶ್ರೀನಿವಾಸನ್, ಅಧ್ಯಕ್ಷರು, ಕೆನರಾ ಬ್ಯಾಂಕ್ ನೌಕರರ ಸಂಘ

ದಾವಣಗೆರೆ: ದೇಶದ ಅತೀ ದೊಡ್ಡ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯಾದ ಎಐಬಿಇಎ - ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸಂಯೋಜನೆಯನ್ನು ಹೊಂದಿರುವ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ (1951-2026) ಸ್ಥಾಪನೆಗೊಂಡು 75 ವರ್ಷಗಳನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ಅಮೃತ ಮಹೋತ್ಸವದ ಆಚರಣೆಯ ಭಾಗವಾಗಿ ಸಾಮಾಜಿಕ ಕಳಕಳಿಯ ಕಾರ್ಯಕ್ರಮದಡಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಯಿತು. 

ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ರಾಷ್ಟ್ರೀಯ ಅಧ್ಯಕ್ಷ ಎಂ.ಎಸ್.ಶ್ರೀನಿವಾಸನ್ ಮಾತನಾಡಿ 1951 ರಲ್ಲಿ ಕಾಂ.ಜನಾರ್ಧನ ಪಿಳ್ಳೆ, ಕಾಂ.ನರಸಿಂಹಮೂರ್ತಿ ಮುಂತಾದ ನಾಯಕರುಗಳಿಂದ ಬ್ಯಾಂಕ್ ಆಡಳಿತ ಮಂಡಳಿಯಿಂದ ನೌಕರರ ಮೇಲೆ ನಡೆಯುತ್ತಿದ್ದ ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ ಪ್ರತಿಭಟಿಸಿ ಕೆನರಾ ಬ್ಯಾಂಕ್ ನೌಕರರ ಸಂಘವನ್ನು ಸ್ಥಾಪಿಸಿದರು. ಅಂದಿನಿಂದ ಇಂದಿನವರೆಗೂ ಸಂಘವು ನೌಕರರ ಹಿತರಕ್ಷಣೆಗಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದೆ. ಸಂಘವು 2001 ನೇ ಇಸವಿಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಜಾರಿಗೆ ತಂದ "ಸಾಮಾಜಿಕ ಕಳಕಳಿಯ ಕಾರ್ಯಕ್ರಮ" ಯೋಜನೆಯು ಇಂದಿಗೂ ಪ್ರತೀ ವರ್ಷ ದೇಶದ ಎಲ್ಲ ರಾಜ್ಯಗಳಲ್ಲಿ ಅನಾಥಾಶ್ರಮ, ಅಬಲಾಶ್ರಮ, ವೃದ್ಧಾಶ್ರಮ ಮುಂತಾದ ಸಹಾಯ ಮಾಡಲು ಅರ್ಹವಿರುವ ಸಂಘ ಸಂಸ್ಥೆಗಳಿಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಪ್ರತೀ ವರ್ಷ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಹಣವನ್ನು ವ್ಯಯಿಸಲಾಗುತ್ತಿದೆ ಎಂದರು. ಇಂದು ಸಂಘವು 75 ವರ್ಷ ಪೂರೈಸಿದ್ದಕ್ಕಾಗಿ 75 ದಾನಿಗಳಿಂದ ರಕ್ತದಾನ ಶಿಬಿರ ಆಯೋಜಿಸಿದ್ದೇವೆ ಎಂದರು.

 

ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್ ದಾವಣಗೆರೆ ಪ್ರಾದೇಶಿಕ ಕಛೇರಿಯ ಉಪ ಮಹಾ ಪ್ರಬಂಧಕ ತನ್ಮಯ್ ದಾಸ್ ಮಾತನಾಡಿ ರಕ್ತ ದಾನವು ಅತ್ಯಂತ ಶ್ರೇಷ್ಠವಾಗಿದೆ. ಯಾಕೆಂದರೆ ನಾವು ರಕ್ತದಾನದ ಮೂಲಕ ಮತ್ತೊಂದು ಜೀವ ಉಳಿಸಬಹುದಾಗಿದೆ. ಕೆನರಾ ಬ್ಯಾಂಕ್ ನೌಕರರ ಸಂಘದ ಸ್ಥಾಪನೆಯಾಗಿ 75 ವರ್ಷಗಳು ತುಂಬಿದ ಈ ಸಂದರ್ಭದಲ್ಲಿ ಆಯೋಜಿಸಿರುವ ಇಂತಹ ಸಾಮಾಜಿಕ ಕಳಕಳಿಯುಳ್ಳ ರಕ್ತದಾನ ಶಿಬಿರವು ಕೆನರಾ ಬ್ಯಾಂಕ್ ನೌಕರರ ಸಂಘದ ಘನತೆಯನ್ನು ಹೆಚ್ಚಿಸಿದೆ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತೊಗಲೇರಿ ಮಾತನಾಡಿ ವಿಶ್ವದ ಮಹಾನ್ ಕಾರ್ಮಿಕ ನಾಯಕ ಕಾರ್ಲ್ ಮಾರ್ಕ್ಸ್ ಸಿದ್ಧಾಂತದಂತೆ ಕಾರ್ಮಿಕ ಸಂಘಗಳು ಕಾರ್ಮಿಕರು ಸಾಮಾಜಿಕವಾಗಿ, ಆರ್ಥಿಕವಾಗಿ ಬಲಿಷ್ಟರಾಗುವುದರ ಜೊತೆಗೆ ಸಮಾಜಮುಖಿಯಾಗಿಯೂ ಕಾರ್ಯನಿರ್ವಹಿಸಬೇಕು. ಅದರಂತೆ ಕೆನರಾ ಬ್ಯಾಂಕ್ ನೌಕರರ ಸಂಘವು ಸಾಮಾಜಿಕ ಕಳಕಳಿಯ ಯೋಜನೆಯಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ರಕ್ತದಾನ ಶಿಬಿರ ಏರ್ಪಡಿಸಿರುವುದು ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮವಾಗಿದೆ ಎಂದರು.

ಈ ರಕ್ತದಾನ ಶಿಬಿರವನ್ನು ಕೆನರಾ ಬ್ಯಾಂಕ್ ನೌಕರರ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, ರಾಜ್ಯ ಉಪಾಧ್ಯಕ್ಷ ಕೆ.ವಿಶ್ವನಾಥ್ ಬಿಲ್ಲವ, ರಾಜ್ಯ ಸಮಿತಿ ಸದಸ್ಯ ಪರಶುರಾಮ ಮೊದಲಾದ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಮತ್ತು ಬಾಪೂಜಿ ಆಸ್ಪತ್ರೆಯ ರಕ್ತನಿಧಿ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಯಿತು ಹಾಗೂ 75 ದಾನಿಗಳಿಂದ ರಕ್ತ ಸಂಗ್ರಹಿಸಲಾಯಿತು. ಬಾಪೂಜಿ ಬ್ಲಡ್ ಬ್ಯಾಂಕಿನ ಡಾ.ಆದಿಚೆರ್ಲ ಗೋವರ್ಧನ್, ಡಾ.ದಿವ್ಯಾ, ಡಾ.ಧನ್ಯಕುಮಾರ್ ಮತ್ತು ವೈಧ್ಯಕೀಯ ಸಿಬ್ಬಂದಿಗಳು ಇದ್ದರು.

ಸಮಾರಂಭದಲ್ಲಿ ಕೆನರಾ ಬ್ಯಾಂಕ್ ದಾವಣಗೆರೆ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ರವಿಮೋಹನ್ ಗುಪ್ತಾ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ, ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಪಡದಯ್ಯ ಹಿರೇಮಠ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಡಾ.ನಾಗೇಶಯ್ಯ, ಸಾಹಿತಿ ಜಿ‌.ಕೆ.ಕುಲಕರ್ಣಿ, ಬೇತೂರು ಎಂ.ಷಡಾಕ್ಷರಪ್ಪ, ಕೆ.ಭಾರ್ಗವಿ ಮಂಜುನಾಥ್, ಜೆ‌.ಟಿ.ಶಕ್ತಿಪ್ರಸಾದ್, ಟಿ.ಪ್ರಹ್ಲಾದ್, ಪ್ರದೀಪ್ ಪಾಟೀಲ್, ಕೆನರಾ ಬ್ಯಾಂಕ್ ಅಧಿಕಾರಿಗಳು, ಕೆನರಾ ಬ್ಯಾಂಕ್ ನೌಕರರ ಸಂಘದ ಜಿ.ಶ್ರೀನಿವಾಸ, ಹರ್ಷ ವಲ್ಲೂರ್, ಮಿಥುನ್ ಜಿ.ಕೆ., ಸೈಯ್ಯದ್ ಚಾಂದ್ ಬಾಷಾ, ಸಿ.ಸುರೇಶ್, ಎಸ್.ವಿ.ಮಂಜುನಾಥ್, ಹೆಚ್.ಮಹೇಶ್ವರಪ್ಪ, ಹನುಮೇಶ್ ಗಂಗರಾಹುತರ್ ಹಾಗೂ ಎಂ.ಡಿ.ವಿದ್ಯಾಸಾಗರ್, ಅರ್.ಮಂಜಪ್ಪ, ಹೆಚ್‌.ಜೆ.ಆಶಾ, ಪ್ರಶಾಂತ್ ಶ್ರೀನಿವಾಸ್, ಕೆ.ಆರ್‌.ಹರ್ಷ, ಡಿ.ಹರ್ಷದ್ ಮತ್ತಿತರರು ಭಾಗವಹಿದ್ದರು.

ಧನ್ಯವಾದಗಳೊಂದಿಗೆ,

ಕೆ.ರಾಘವೇಂದ್ರ ನಾಯರಿ

ರಾಷ್ಟ್ರೀಯ ಕಾರ್ಯದರ್ಶಿ

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್

ದಾವಣಗೆರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456