ಕೇಂದ್ರ ಸರ್ಕಾರದ ವಿರುದ್ಧ ಕೆಂಬಾವುಟ ಅಡಿಯಲ್ಲಿ ಹೋರಾಟಕ್ಕೆ ಸಜ್ಜು

May 12, 2026 - 18:05
 0  1
ಕೇಂದ್ರ ಸರ್ಕಾರದ ವಿರುದ್ಧ ಕೆಂಬಾವುಟ ಅಡಿಯಲ್ಲಿ ಹೋರಾಟಕ್ಕೆ ಸಜ್ಜು
ವರದಿ ಸುಬ್ಬು ಭಾಗ್ಯನಗರ

       ಭಾಗ್ಯನಗರ: ಗ್ರಾಮೀಣ ಬಡವರ ಮತ್ತು ಕೂಲಿ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿಯುವ ಹುನ್ನಾರ ನಡೆಸಿ ಮಹತ್ಮ ಗಾಂಧಿ ನರೇಗಾ ಕಾಯ್ದೆಯನ್ನು ವಿಬಿ-ಜಿ ರಾಮ್ (ಜಿ) ಯೋಜನೆಯನ್ನಾಗಿ ಪರಿವರ್ತನೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೇ 15 ತಾಲೂಕಿನ ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ಏಕಕಾಲದಲ್ಲಿ ಹೊರ ಮಾಡುತ್ತೇವೆ ಎಂದು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ಕಾರ್ಯದರ್ಶಿ ಸೋಮು ತಿಳಿಸಿದ್ದಾರೆ.

ಪಟ್ಟಣದ ಪತ್ರಕರ್ತರ ಭವನದಲ್ಲಿ AIAWU, KPRS, CITU  ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಪತ್ರಿಕಾಘೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಗಿಂತ ಮೊದಲು ವಿವಿಧ ರಾಜ್ಯಗಳಲ್ಲಿ ಹಲವು ರೀತಿಯಲ್ಲಿ ಉದ್ಯೋಗದ ಯೋಜನೆಗಳು ಜಾರಿಯಾಗುತ್ತಿದ್ದವು.

ಆದರೆ ಆ ಯೋಜನೆಗಳು ನಿರ್ದಿಷ್ಟ ವ್ಯಾಪ್ತಿಯಲ್ಲಿ ಇರುತ್ತಿದ್ದವು ಆದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ 2005ರಲ್ಲಿ ಜಾರಿಯಾದಾಗ ಅದು ದೇಶಾದ್ಯಂತ ಒಂದೇ ರೀತಿಯಲ್ಲಿ ಜಾರಿಯಾಗುವಂತೆ ಉದ್ಯೋಗದ ಅವಶ್ಯಕತೆ ಇರುವವರೆಲ್ಲರಿಗೂ ಉಪಯೋಗವಾಗುವ ರೀತಿಯಲ್ಲಿ ಈ ಕಾಯ್ದೆಯನ್ನು ರೂಪಿಸಲಾಗಿತ್ತು ಆದರೆ ಈಗ ಮಹತ್ಮ ಗಾಂಧಿ ನರೇಗಾ ಕಾಯ್ದೆಯನ್ನು ವಿಬಿ- ಜಿ ರಾಮ್ (ಜಿ) ಯೋಜನೆಯನ್ನಾಗಿ ಪರಿವರ್ತನೆ ಮಾಡುತ್ತಿರುವ ಕೇಂದ್ರ ಬಿಜೆಪಿ ಮೋದಿ ಸರ್ಕಾರ ಬಡವರನ್ನು ಮತ್ತಷ್ಟು ಶೋಷಿತರಾನ್ನಾಗಿ ಮಾಡುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡಲಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲುಕು ಕಾರ್ಯದರ್ಶಿ ಡಿ.ಟಿ ಮುನಿಸ್ವಾಮಿ,ಖಜಾಂಚಿ ಜಿ.ಕೃಷ್ಣಪ್ಪ, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಚೆಂಚುರಾಯನಪಲ್ಲಿ ಕೃಷ್ಣಪ್ಪ,ಸಿ.ಐ.ಟಿ.ಯು ಮುಖಂಡ ಮುಸ್ತಫಾ "ಡಿ.ಎಚ್.ಎಸ್. ಮುಖಂಡ ಅಶ್ವಥಪ್ಪ,ಸೇರಿದಂತೆ ಮತ್ತಿತರರು ಇದ್ದರು.... ವರದಿ ಸುಬ್ಬು ಭಾಗ್ಯನಗರ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456