ಕೇಂದ್ರ ಸರ್ಕಾರ ತಂದಿರುವ ಕಾರ್ಮಿಕ ಸಂಹಿತೆಗಳು ರದ್ದಾಗಬೇಕು-ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ
ಭಾಗ್ಯನಗರ: ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪಂಚಾಯತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ದಮನ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ನಮ್ಮ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ. ಪಿ. ಮುನಿವೆಂಕಟಪ್ಪ ತಿಳಿಸಿದರು.
ಪಟ್ಟಣದ ಗೂಳೂರು ವೃತ್ತದಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಪ್ರಾರಂಭಿಸಿದ ಹೊರಟಗಾರ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತರ ವಿರೋಧಿ ಕಾನೂನು ನೀತಿಗಳನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಕೂಗುತ್ತ ಸಾಗಿದ ಹೋರಾಟಗಾರರು ಕೆ. ಎಸ್. ಆರ್.ಟಿ. ಸಿ ಬಸ್ ನಿಲ್ದಾಣದ ಬಳಿ ಇರುವ ಮಾಜಿ ಶಾಸಕ ದಿವಂಗತ ಜಿ.ವಿ. ಶ್ರೀ ರಾಮರೆಡ್ಡಿ ಅವರ ಪುತ್ತಳಿ ಬಳಿ ಜಮಯಿಸಿದ ಅವರು ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಸಂಪನ್ಮೂಲ ನೀಡಿ, ಅಧಿಕಾರದ ವಿಕೇಂದ್ರೀಕರಣವನ್ನು ಕಾರ್ಯರೂಪಕ್ಕೆ ತರುವ ಮೂಲಕ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶ ಹೊಂದಬೇಕಿರುವ ಕೇಂದ್ರ ಸರ್ಕಾರ ಪಂಚಾಯತಿಗಳನ್ನು ಬಲಹೀನ ಮಾಡುತ್ತಿದೆ ಹಾಗೂ ಈ ದೇಶದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರಿಗೆ ಮತ್ತು ಆಹಾರ ನೀಡುವ ರೈತನಿಗೆ ಮತ್ತು ಈ ದೇಶದ ಜನರಿಗೆ ಮೂಲಭೂತ ಹಕ್ಕುಗಳನ್ನು ನೀಡಬೇಕಾದ ಕೇಂದ್ರದ ಬಿಜೆಪಿ ಸರಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಭೂಕಾಯ್ದೆ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡುವ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ಮಾಡುವುದಲ್ಲದೆ,ಮುಂದಿನ ದಿನಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ,ಪಂಚಾಯತ್ ವ್ಯವಸ್ಥೆಯನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಕೇಂದ್ರ ಸರ್ಕಾರ ತಂದಿರುವ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸುತ್ತೇವೆ ಎಂದರು.
ಈ ಸಂಧರ್ಭದಲ್ಲಿ ಹೋರಾಟಗಾರರಾದ ಮುನಿವೆಂಕಟಪ್ಪ, ಚನ್ನರಾಯಪ್ಪ,ಎಂ. ಎಸ್. ನರಸಿಂಹ ರೆಡ್ಡಿ, ಡಿ.ಸಿ. ಶ್ರೀನಿವಾಸ್, ಮುಸ್ತಫಾ,ಮಸನ ಮುನಿಯಪ್ಪ,ರಘು ರಾಮ ರೆಡ್ಡಿ,ಅಶ್ವಥಪ್ಪ,ನರಸಿಂಹ ಮೂರ್ತಿ, ಮುನಿಸ್ವಾಮಿ, ಟೋಲ್ ಗೇಟ್ ನೌಕರ ನಾಗ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು...
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
