ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕೆಜಿಎಫ್., ಜ. ೧೮: ಬಂಗಾರಪೇಟೆ ಪೊಲೀಸ್ ಠಾಣೆಯ ಕೊಲೆ ಪ್ರಕರಣವೊಂದರ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ೩ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ, (ಕೆ.ಜಿ.ಎಫ್ ಪೀಠ) ನ್ಯಾಯಾಲಯವು ತೀರ್ಪು ನೀಡಿ ಆದೇಶಿಸಿದೆ.೨೦೨೨ನೇ ಸಾಲಿನ ಫೆಬ್ರವರಿ ೧೮ ರಂದು ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ತಮ್ಮೇನಹಳ್ಳಿ ಗ್ರಾಮದಲ್ಲಿ ಕೃಷ್ಣಮೂರ್ತಿ @ ಕೃಷ್ಣಪ್ಪ ಎಂಬುವರನ್ನು ಜಮೀನು ವಿಚಾರಕ್ಕಾಗಿ ಕೊಲೆ ಮಾಡಿದ್ದ  ಆರೋಪಿಗಳಾದ ಆರ್.ವೆಂಕಟೇಶ, ಕೃಷ್ಣಪ್ಪ, ಮುನಿರಾಜು, ವಿ.ವೆಂಕಟೇಶ ಎಂಬುವರ ವಿರುದ್ದ ಅಂದಿನ ಬಂಗಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಸುನಿಲ್‌ಕುಮಾರ್ ನ್ಯಾಯಾಲಯದಲ್ಲಿ ದೋಷಾರೋಪಣ ಪತ್ರವನ್ನು ಸಲ್ಲಿಸಿಕೊಂಡಿದ್ದು, ಕೆಜಿಎಫ್ ಪೀಠದ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ಅವರು ವಿಚಾರಣೆಯನ್ನು ಪೂರ್ಣಗೊಳಿಸಿ, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ರೂ. ೧೪,೦೦೦/- ಗಳ ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಕೆ.ಎಸ್.ಜ್ಯೋತಿಲಕ್ಷ್ಮೀ, ನಾನುಸಾದ್ ನಾಯಕ್ ವಾದ ಮಂಡಿಸಿದರು.