ಗಂಗೋತ್ರಿ ಪೆಟ್ರೋಲ್ ಬಂಕ್‌ನಲ್ಲಿ ದಸರಾ ಹಬ್ಬದ ಸಂಭ್ರಮ – ಸಿಬ್ಬಂದಿಗೆ ಬಟ್ಟೆ, ಸಿಹಿ ವಿತರಣೆ

ಗಂಗೋತ್ರಿ ಪೆಟ್ರೋಲ್ ಬಂಕ್‌ನಲ್ಲಿ ದಸರಾ ಹಬ್ಬದ ಸಂಭ್ರಮ – ಸಿಬ್ಬಂದಿಗೆ ಬಟ್ಟೆ, ಸಿಹಿ ವಿತರಣೆ

ಭಾಗ್ಯನಗರ: ಗಂಗೋತ್ರಿ ಪೆಟ್ರೋಲ್ ಬಂಕ್‌ನಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಾಲೀಕರು ಹೊಸ ಬಟ್ಟೆ ಹಾಗೂ ಸಿಹಿತಿಂಡಿಗಳನ್ನು ವಿತರಿಸಿ, ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.

ಹಬ್ಬದ ಸಂದರ್ಭದಲ್ಲಿ ಸಿಬ್ಬಂದಿಯೊಂದಿಗೆ ಸಂತೋಷ ಹಂಚಿಕೊಂಡ ಮಾಲೀಕರು, ಸಂಸ್ಥೆಯ ಅಭಿವೃದ್ಧಿಯಲ್ಲಿ ಸಿಬ್ಬಂದಿಯ ಶ್ರಮ ಮತ್ತು ಸಹಕಾರ ಮಹತ್ವದ್ದಾಗಿದೆ ಎಂದು ತಿಳಿಸಿ, ಎಲ್ಲರೂ ಕುಟುಂಬ ಸಮೇತರಾಗಿ ಸಂತೋಷದಿಂದ ಹಬ್ಬ ಆಚರಿಸುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಉಪಸ್ಥಿತರಿದ್ದು, ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು..