ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳ ಕೊಡುಗೆ

ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳ ಕೊಡುಗೆ
ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದವರು 69 ನೇ ಕನ್ನಡ ರಾಜ್ಯೋತ್ಸವ ಸುಸಂದರ್ಭದಲ್ಲಿ ಕರ್ನಾಟಕದ ರಾಜ್ಯಾದ್ಯಂತ 69 ಕೇಂದ್ರಗಳಲ್ಲಿ ಕರ್ನಾಟಕ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸುವುದಲ್ಲದೆ, 69 ಸರಕಾರಿ ಶಾಲೆಗಳ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಬೆಂಗಳೂರು ಬಸವನಗುಡಿಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು. ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಶ್ರೀ ಎಂ ವೆಂಕಟೇಶ ಶೇಷಾದ್ರಿ, ಕಾರ್ಯದರ್ಶಿ ಶ್ರೀ ಕೆ ಜಿ ಸಂಪತ್ ಕುಮಾರ್ , ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕುಸುಮಾವತಿ, ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಅನ್ನಪೂರ್ಣ ಮತ್ತು ರುದ್ರಾಂಬಿಕಾ ರವರು ಉಪಸ್ಥಿತರಿದ್ದರು .