ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವ್ಯವಸ್ಥೆ ಖಂಡಿಸಿ ಸಾರ್ವಜನಿಕರಿಂದ ಪ್ರತಿಭಟನೆ

Apr 1, 2026 - 17:39
 0  39
ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವ್ಯವಸ್ಥೆ ಖಂಡಿಸಿ ಸಾರ್ವಜನಿಕರಿಂದ ಪ್ರತಿಭಟನೆ

      ಸಂತೆಮರಹಳ್ಳಿ: ಸಮೀಪದ ಕುದೇರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಾರ್ಯ ವೈಖರಿ ಖಂಡಿಸಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸಿ ಘೋಷಣೆ ಕೂಗಿ ಸಾರ್ವಜನಿಕರು ಪ್ರತಿಭಟನೆ ನಡಿಸಿದರು.

ಈ ವೇಳೆಯಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಶಿವಕುಮಾರ್ ಮಾತನಾಡಿ ಗ್ರಾಮ ಪಂಚಾಯ್ತಿ ಸಮರ್ಪಕವಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ವಿಪಲವಾಗಿದೆ ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭಾರತದ ಸಂವಿಧಾನದ ಅಡಿಯಲ್ಲಿ ಕಾರ್ಯಕ್ರಮ ನಿರ್ವಹಿಸುತ್ತಿಲ್ಲ ಹಾಗೂ 
ಗ್ರಾಮ ಪಂಚಾಯ್ತಿ ನಿಯಮಗಳನ್ನ ಗಾಳಿಗೆ ತೂರಿ ಕಾಮಗಾರಿ ಮಾಡುತ್ತಿದ್ದಾರೆ ಎಂದು ಈಗಾಗಲೇ ಸಂಬಂಧ ಪಟ್ಟ ಸಿಇಓ ಗಮನಕ್ಕೆ ತಂದಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಸಾರ್ವಜನಿಕ ಕೆಲಸ ಕಾರ್ಯಗಕಳನ್ನ ಮಾಡದೇ ವಿಳಂಬ ನೀತಿ ದೋರಣೆ ತೋರುತ್ತಿದ್ದಾರೆ ಹಾಗೂ ಹಲವಾರು ಸಾರ್ವಜನಿಕರ ಕೆಲಸಗಳು ಈಗಾಗಲೇ ಬಾಕಿ ಉಳಿದಿದೆ ಎಂದರು.
ಕುದೇರು ಗ್ರಾಮದಲ್ಲಿ ಸಮರ್ಪಕವಾಗಿ ಚರಂಡಿ ನೀರು ಸರಿಯಾಗಿ ಹೋಗದೆ ನಿಂತಲ್ಲೇ ನೀರು ನಿಲ್ಲುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಬಹುದು ಎಂದು ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 
ಬಾಕಿ ಉಳಿದಿರುವ ಎಲ್ಲಾ ಸಾರ್ವಜನಿಕರ ಕೆಲವು ಮಾಡಿ ಸಾರ್ವಜನಿಕರ ಹಿತಾ ಕಾಪಾಡುವಲ್ಲಿ ಮುಂದಾಗಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವಾದಾಗಿ ಎಚ್ಚರಿಕೆ ನೀಡಿದರು.
   

ಈ ಸಂದರ್ಭದಲ್ಲಿ ತಾಲೋಕು ಪಂಚಾಯಿತಿ ಯೋಜನಾಧಿಕಾರಿ ಕಿರಣ್ ಕುಮಾರ್ ಧಾವಿಸಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನ ಮಾಡಿದರು, ಆದರೆ ಪ್ರತಿಭಟನಾ ಕರಾರು ಕೂಡಲೇ ಸ್ಥಳಕ್ಕೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಣ ಅಧಿಕಾರಿಗಳು ಆಗಮಿಸಬೇಕೆಂದು ಪ್ರತಿಭಟನೆ ಮುಂದುವರಿಸಿದರು.
 
ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣರಾಜ್,  ಮಹದೇವ್,ಮಲ್ಲೇಶ್, ಬಸವರಾಜ್, ಭರತ್, ಪರಶಿವಮೂರ್ತಿ,  ಗಿಡ್ಡಣ್ಣ ಶಿವನಾಗಯ್ಯ,ಚೆನ್ನಮಲ್ಲಯ್ಯ, ಸಂತೋಷ್, ಮಾದಯ್ಯ , ನಾಗರಾಜ್,ಶಿವಮ್ಮ, ಪುಟ್ನಿಂಗಮ್ಮ,  ವೇದಾವತಿ ,ನೀಲಮ್ಮ ಸೇರಿದಂತೆ ಇನ್ನಿತರರು ಭಾಗವಹಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456