ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಸಮಾಜ ಸೇವಕ ಮೋಹನ್ ಕೃಷ್ಣ ಅವರಿಂದ ಅಭಿನಂದನೆ

Apr 29, 2026 - 16:22
 0  1
ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಸಮಾಜ ಸೇವಕ ಮೋಹನ್ ಕೃಷ್ಣ ಅವರಿಂದ ಅಭಿನಂದನೆ

      ಬೇತಮಂಗಲ: ಇಲ್ಲಿಗೆ ಸಮೀಪದ ಟಿ ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಗರಾಪುರದ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಮಲ ಹೃದಯ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಅಂಕಗಳನ್ನು ಗಳಿಸಿರುವ ಹಿನ್ನೆಲೆ ಸಮಾಜ ಸೇವಕ ವಿ ಮೋಹನ್ ಕೃಷ್ಣ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿದರು.

ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು, ಶಿಕ್ಷಣ ಎನ್ನುವುದು ಬಡತನದ ಸಂಕೋಲೆಯನ್ನು ಕತ್ತರಿಸುವ ಅಸ್ತ್ರ ಮೊರಾರ್ಜಿ ದೇಸಾಯಿ ಶಾಲೆಯ ಮಕ್ಕಳು ಹತ್ತನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.

ನಮ್ಮ ಆರ್ ಕೆ ಫೌಂಡೇಶನ್ ಶಿಕ್ಷಣಕ್ಕೆ ಮೊದಲು ಆದ್ಯತೆ ನೀಡುತ್ತದೆ ನಾನು ಸತತವಾಗಿ 8 ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಿದ್ದೇನೆ ಆದರೆ ಕೆಲವರು 2 ರೂಪಾಯಿ ಪುಸ್ತಕಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಟೀಕಿಸಿದರು, ಈ ದಿನ ವಿದ್ಯಾರ್ಥಿಗಳು ಅದೇ ಪುಸ್ತಕಗಳನ್ನು ಬಳಸಿ ಪರೀಕ್ಷೆಯಲ್ಲಿ ಉತ್ತೀರ್ನರಾಗಿದ್ದಾರೆ ಎಂದರು.

 ದುಶ್ಚಟಗಳಿಂದ ದೂರವಿರಿ: ಪ್ರಸ್ತುತವಾಗಿ ಮಕ್ಕಳು ಮೊಬೈಲ್ ವ್ಯಾಮೋಹ ಮತ್ತು ಕೆಟ್ಟ ಹವ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ  ಶಿಸ್ತು ಮತ್ತು ಕಠಿಣ ಪರಿಶ್ರಮವಿದ್ದರೆ ಮಾತ್ರ ಉಜ್ವಲ ಭವಿಷ್ಯವನ್ನು ಸಾಧಿಸಲು ಸಾಧ್ಯ ಎಂದು ತಿಳಿಸಿದರು.

ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ: ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅಂಕಗಳನ್ನು ಗಳಿಸಲು ಕಾರಣ ಭೂತರಾದ ಶಿಕ್ಷಕರನ್ನು ಶಾಲು ಹೊದಿಸಿ ಸಿಹಿ ನೀಡುವುದರ ಮೂಲಕ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆರ್ ಕೆ ಫೌಂಡೇಶನ್ ಪದಾಧಿಕಾರಿಗಳಾದ ಕೃಷ್ಣಪ್ಪ ಬಾಬುರೆಡ್ಡಿ ಗಂಗಿರೆಡ್ಡಿ, ನಾಗೇಶ್ ತೇಜು ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಮಕ್ಕಳ ಪೋಷಕರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456