ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಭರತನಾಟ್ಯ ನೃತ್ಯ ಪ್ರದರ್ಶಿಸಿದ ತಾನೀಶ್.ಎನ್
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನರಸಾಪುರ ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ನರಸಾಪುರ ಇವರ ಸಾರಥ್ಯದಲ್ಲಿ ನಡೆದ "ಚಿಗುರು" ಸಾಂಸ್ಕೃತಿಕ ಕಾರ್ಯಕ್ರಮ-2025 ಇದರ ಉದ್ಘಾಟನೆಯನ್ನು ಹದಿನೈದು ವಿಶ್ವದಾಖಲೆಗಳ ಸರದಾರ, ಅಂತರರಾಷ್ಟ್ರೀಯ ಭರತನಾಟ್ಯ ಕಲಾವಿದ, ಹಾಗೂ ಹೊಯ್ಸಳ ಪ್ರಶಸ್ತಿ ಪುರಸ್ಕೃತ ಬಾಲಕ ಗ್ರ್ಯಾಂಡ್ ಮಾಸ್ಟರ್ ತಾನೀಶ್.ಎನ್ ರವರು ದೀಪವನ್ನು ಬೆಳಕಿಸುವ ಮೂಲಕ ಮಕ್ಕಳ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ತಾನೀಶ್.ಎನ್ ರವರು ಆಧ್ಯಾತ್ಮಿಕತೆಯನ್ನು ಪ್ರತಿಬಿಂಬಿಸುವ ಶಿವ ಪರಮಾತ್ಮನ ದೈವಿಕ ಗೀತೆಗೆ ಭರತನಾಟ್ಯ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮದ ಚಿಗುರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ ಸಾವಿರಾರು ಮಕ್ಕಳ ಪ್ರೀತಿಗೆ ಪಾತ್ರನಾದನು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಎನ್ ವಿಜಯಲಕ್ಷ್ಮಿ
ಶ್ವೇತಾಂಜಲಿ ಭರತನಾಟ್ಯ ಶಾಲೆ ಹಾಗೂ ವಿಶ್ವಮಾನವ ಕುವೆಂಪು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ತಾನೀಶ್.ಎನ್ ರವರ ತಾಯಿ ಶ್ರೀಮತಿ ಶ್ವೇತನಾಗರಾಜ್ , ತಂದೆ ಅರಳು ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಯುವಕವಿ ಲಕ್ಕೂರು ಎಂ.ನಾಗರಾಜ್ ಹಾಜರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
