ಜೆಡಿಎಸ್ ಯುವ ಮುಖಂಡ ಪ್ರಕಾಶ್ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Jun 15, 2026 - 10:59
 0  21
ಜೆಡಿಎಸ್ ಯುವ ಮುಖಂಡ ಪ್ರಕಾಶ್ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಕೆಜಿಎಫ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೆಡಿಎಸ್ ಯುವ ಮುಖಂಡ ಹಾಗೂ ನಗರಸಭೆ ಆಕಾಂಕ್ಷಿ ಪ್ರಕಾಶ್ ಅವರ ನೇತೃತ್ವದಲ್ಲಿ ಎನ್‌ಟಿ ಬ್ಲಾಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಜೆಡಿಎಸ್ ಅಭ್ಯರ್ಥಿ ಡಾ ರಮೇಶ್ ಬಾಬು ಅವರ ಸಹಯೋಗದೊಂದಿಗೆ ಹಾಗೂ ಚೆಟ್ಟಿನಾಡ್ ಆಸ್ಪತ್ರೆಯ ಸಹಕಾರದಲ್ಲಿ ಈ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಹಾಗೂ ನಗರಸಭೆ ಆಕಾಂಕ್ಷಿ ಪ್ರಕಾಶ್ ಮಾತನಾಡಿ, ನಾನು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮಾಜ ಸೇವೆ ಮಾಡುತ್ತಿಲ್ಲ. ಜನರ ಆರೋಗ್ಯ ಮತ್ತು ಕಲ್ಯಾಣವೇ ನನ್ನ ಮುಖ್ಯ ಉದ್ದೇಶವಾಗಿದೆ. ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ಹೊಂದಿದ್ದೇನೆ. ಜನರ ಆಶೀರ್ವಾದ ಮತ್ತು ಸಹಕಾರದಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. 

ಚೆಟ್ಟಿನಾಡ್ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ ವಿವಿಧ ಶಸ್ತ್ರಚಿಕಿತ್ಸೆಗಳು ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಆರೋಗ್ಯ ಸಮಸ್ಯೆಗಳ ಪತ್ತೆ ಹೆರಿಗೆ ಬೆಂಬಲ ಹೆರಿಗೆ ನಂತರ ತಾಯಿಯ ಬ್ಯಾಂಕ್ ಖಾತೆಗೆ 5 ಸಾವಿರ ಇಂತಹ ಅನೇಕ ಉಚಿತ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವಮುಖಂಡ ಹಾಗೂ ನಗರಸಭೆ ಆಕಾಂಕ್ಷಿ ಪ್ರಕಾಶ್ ಹಾಗೂ ಚೆಟ್ಟಿನಾಡ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು

What's Your Reaction?

like

dislike

love

funny

angry

sad

wow

Suddi Kirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268, 9686665456 #suddikiranatv #suddikiranaott