ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಮತದಾನದ ಹಕ್ಕನ್ನು ಮಾರಿಕೊಳ್ಳಬೇಡಿ: ವಿ.ಮೋಹನ್ ಕೃಷ್ಣ ಕರೆ

Apr 15, 2026 - 15:21
 0  3
ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಮತದಾನದ ಹಕ್ಕನ್ನು ಮಾರಿಕೊಳ್ಳಬೇಡಿ: ವಿ.ಮೋಹನ್ ಕೃಷ್ಣ ಕರೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೇತಮಂಗಲ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಸಮಾನವಾಗಿ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ ಎಂದು ಸಮಾಜ ಸೇವಕ ವಿ. ಮೋಹನ್ ಕೃಷ್ಣ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಇಲ್ಲಿಗೆ ಸಮೀಪದ ಟಿ ಗೊಲ್ಲಹಳ್ಳಿ ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ 135ನೇ ಜಯಂತೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ನಮ್ಮ ಒಂದು ಮತದ ಮೌಲ್ಯ ಹಣಕ್ಕಿಂತ ಮಿಗಿಲಾದದ್ದು ನಾವು ಮಾರಾಟವಾದರೆ ನಮ್ಮ ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ನಾವೇ ಕಳೆದುಕೊಂಡಂತೆ. ಆದುದರಿಂದ ಮತವನ್ನು ಮಾರಿಕೊಳ್ಳಬೇಡಿ ಎಂದು ಸಾರ್ವಜನಿಕರಿಗೆ ತಿಳಿಸಿದರು. 

ಮನಕುಲಕ್ಕೆ ದಿನನಿತ್ಯ ಜೀವನ ನಡೆಸಲು ಹಣ ಅತ್ಯಗತ್ಯ ಆದರೆ ಹಣ ಕೊಡದೆ ಅಂಬೇಡ್ಕರ್ ಅವರು ಸಂವಿಧಾನದ ಅಡಿಯಲ್ಲಿ ಕೊಟ್ಟಿರುವಂತಹ ಹಕ್ಕು ಎಂದರೆ ಮತದಾನ ಹಕ್ಕು ಇದನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ ಎಂದರು.

ಒಂಬತ್ತು ವರ್ಷಗಳಿಂದ ಸಮಾಜಸೇವೆ: ಒಬ್ಬ ಬಡ ಮಗನಾಗಿ ನನ್ನ ಜನತೆ ಸೇವೆ ಮಾಡಲು ಕೆಜಿಎಫ್ ಕ್ಷೇತ್ರದಲ್ಲಿ ನಿರಂತರವಾಗಿ 9 ವರ್ಷಗಳಿಂದ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. 

ಹಣದ ಆಮಿಷಕ್ಕೆ ಒಳಗಾಗಬೇಡಿ: ಇತ್ತೀಚಿನ ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಹಣ ಮತ್ತು ಉಡುಗೊರೆಗಳ ಆಮಿಷ ತೋರಿಸಿ ಮತ ಪಡೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ ಅಲ್ಪ ಹಣಕ್ಕೆ ಮತ ಮಾರಿಕೊಳ್ಳುವುದು ನಮ್ಮ ಹಕ್ಕನ್ನು ನಾವೇ ಹರಾಜು ಹಾಕಿಕೊಂಡಂತೆ ಎಂದು ಎಚ್ಚರಿಸಿದರು. 

ಕ್ಷೇತ್ರದ ಅಭಿವೃದ್ಧಿ ಆಯ್ಕೆ ನಿಮ್ಮ ಕೈಯಲ್ಲಿದೆ: ಮುಂದಿನ ದಿನಗಳಲ್ಲಿ ಅಂಬೇಡ್ಕರ್ ರವರು ಕಂಡಂತ ಕನಿಸಿನಂತೆ ಹಣ ಆಸೆಗೆ ಒಳಗಾಗದೆ ನಿಮ್ಮ ಸೇವೆ ಮಾಡುವಂತಹ ಜನನಾಯಕರನ್ನು ಆರಿಸಿಕೊಳ್ಳಿ ಎಂದು ಮತದಾರರಲ್ಲಿ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಗಂಗಿರೆಡ್ಡಿ, ಮಾಜಿ ಗ್ರಾಪಂ ಸದಸ್ಯ ಬಾಬು ರೆಡ್ಡಿ, ಗುತ್ತಿಗೆದಾರ ಕೃಷ್ಣಪ್ಪ, ಮುಖಂಡರಾದ ಅರುಣ್ ವಿಜಿ. ನಾಗೇಶ್ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456