ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಶಿಕ್ಷಣ ಜೊತೆಗೆ ಪರಿಸರ ಸಂರಕ್ಷಣೆ ಅತೀ ಮುಖ್ಯ.... ಅಮರೇಗೌಡ ಮಲ್ಲಾಪುರ
ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿರುವ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಸಿಂಧನೂರು ನಗರದ ಬಸವ ವೃತ್ತದಲ್ಲಿ ವನಸಿರಿ ಪೌಂಡೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಸಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಥ ಸಂಚಲನ ಮಾಡಿ ಪರಿಸರ ಸಂರಕ್ಷಣೆಯ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಪೌಂಡೇಷನ್ ರಾಜ್ಯಾಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಅವರನ್ನು ಅತ್ಯಂತ ವಿಜೃಂಭಣೆ ಯಿಂದ ವಿದ್ಯಾರ್ಥಿಗಳು,ಶಿಕ್ಷಕರು ಸ್ವಾಗತಿಸಿದರು.ನಂತರ ಶಾಲೆಯಲ್ಲಿರುವ ಗಿಡಮರಗಳಿಗೆ ಹೂವಿನಿಂದ ಬಿತ್ತಿ ಪತ್ರಗಳನ್ನು ಅಂಟಿಸಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿ,ನೀರು ಹಾಕಿ,ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಕುರಿತು ಮಾತನಾಡಿದ ವನಸಿರಿ ಪೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಶಿಕ್ಷಣ ಪಡೆಯುವುದು ಪ್ರತಿಯೊಂದು ಮಗುವಿನ ಹಕ್ಕು,ಶಿಕ್ಷಣ ಜೊತೆಗೆ ಪರಿಸರವು ಕೂಡಾ ಅಷ್ಟೇ ಮುಖ್ಯವಾಗಿರುತ್ತದೆ ಶಿಕ್ಷಣ ಮಾನವನ ಜೀವನದ ಪ್ರಮುಖ ಘಟ್ಟ.ಶಿಕ್ಷಣ ಇಲ್ಲದಿದ್ದರೆ ಮನುಷ್ಯ ಏನನ್ನೂ ಗುರಿ ಮುಟ್ಟಲು ಸಾಧ್ಯವಿಲ್ಲ,ಆದರೆ ಪರಿಸರ ಇಲ್ಲದಿದ್ದರೆ ಮನುಷ್ಯ ಉಸಿರಾಡಲು ಕೂಡಾ ಸಾಧ್ಯವಿಲ್ಲ.ಮನುಷ್ಯ ಶುದ್ಧ ಗಾಳಿ ಪಡೆದು ಉಸಿರಾಡಬೇಕಾದರೆ ಹೆಚ್ಚು ಹೆಚ್ಚು ಗಿಡ ಮರಗಳನ್ನ ಬೆಳಸಬೇಕು ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣದ ಜೊತೆ ಜೊತೆಗೆ ಪರಿಸರ ಸಂರಕ್ಷಣೆ ಮಾಡಬೇಕು ಇದು ಅತೀ ಮುಖ್ಯವಾಗಿದೆ ಎಂದರು.
ಈ ಸಂಧರ್ಭದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ
ಶ್ರೀಮತಿ ರಾಘವಿ ರೆಡ್ಡಿ,ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಭಾಗವಹಿಸಿ ಯಶಸ್ವೀಗೊಳಿಸಿದರು.
What's Your Reaction?