ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಮುಬಾರಕ್ ಪಠಾಣ್

Jun 28, 2025 - 16:32
 0  8
ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಮುಬಾರಕ್ ಪಠಾಣ್

ಚನ್ನರಾಯಪಟ್ಟಣ: ಪಟ್ಟಣದ ಟಿಪ್ಪು ಸರ್ಕಲ್ ನಲ್ಲಿ ಏರ್ಪಡಿಸಿದ ಜೆಡಿಎಸ್ ಪಕ್ಷದ  ನೂತನ ಅಧ್ಯಕ್ಷರ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಶ್ರವಣಬೆಳಗೂಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣರವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ಅಧ್ಯಕ್ಷರಾದ ಮುಬಾರಕ್  ಪಠಾಣ್ ರವರಿಗೆ ಆಯ್ಕೆ ಪ್ರಮಾಣ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನು ಈ ದಿನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ, ನೂತನ ಅಧ್ಯಕ್ಷರಾದ ಮುಬಾರಕ್ ಅವರು ಮುಸ್ಲಿಂ ಸಮಾಜದ ಹಿರಿಯ ಮತ್ತು ಕಿರಿಯ ಮುಖಂಡರ ಸಲಹೆ, ಸಹಕಾರ ಪಡೆದು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಿ ಎಂದು ಸಲಹೆ ನೀಡಿದರು. ಮುಸ್ಲಿಂ ಸಮಾಜದ ಬಂಧುಗಳು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ನನಗೆ ಮೂರು ಬಾರಿ ಶಾಸಕನಾಗಲು ಕಾರಣಕರ್ತರಾಗಿದ್ದೀರಾ ಈ ಋಣವನ್ನು ನಾನು ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಇರಲಿ ಎಂದರು. ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಸಮಾಜದ ವ್ಯಕ್ತಿಗಳಿಗೆ ಚನ್ನರಾಯಪಟ್ಟಣ ಪುರಸಭಾ ಅಧ್ಯಕ್ಷರಾಗಿ ನೇಮಕ ಮಾಡಿರುವುದು ಜೆಡಿಎಸ್ ಪಕ್ಷ ಮಾತ್ರ ಎಂದರು.ಇದೇ ಸಂದರ್ಭದಲ್ಲಿ ಶಾಸಕ ಸಿಎನ್ ಬಾಲಕೃಷ್ಣ, ಜೆಡಿಎಸ್ ತಾಲೂಕು ಅಧ್ಯಕ್ಷ ಪರಮ ದೇವರಾಜೇಗೌಡ, ಪುರಸಭಾ ಅಧ್ಯಕ್ಷ ಮೋಹನ್,  ಟಿಎಪಿಎಂಎಸ್ ಅಧ್ಯಕ್ಷರಾದ ಎಮ್ ಆರ್ ಅನಿಲ್, ಶ್ರವಣಬೆಳಗೊಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಬ್ಬು, ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾದ ಮುಬಾರಕ್ ಪಠಾಣ್,ಮಾಜಿ ಪುರಸಭಾ ಅಧ್ಯಕ್ಷರಾದ ಅನ್ಸರ್ ಬೇಗ್, ಮಾಜಿ ಪುರಸಭಾ ಸದಸ್ಯರಾದ ರವೀಶ್, ವೈಹೀದ್, ಸಫೀರ್, ಮುಸ್ಲಿಂ ಮುಖಂಡರಾದ ಅಬ್ದುಲ್ ಹಕ್, ಬಿಲಾಲ್ ಪಠಾಣ್, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456