ದಾಸರ ಪದಗಳ ಗಾಯನ
ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 23, ಗುರುವಾರ ಸಂಜೆ 7-00ಕ್ಕೆ ಕು|| ಸುರಭಿ ಮತ್ತು ಕು|| ಪ್ರೇಕ್ಷಾ ಇವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ಶ್ರೀ ಅಮಿತ್ ಶರ್ಮಾ, ತಬಲಾ ವಾದನದಲ್ಲಿ ಶ್ರೀ ಶ್ರೀನಿವಾಸ ಕಾಖಂಡಕಿ ಸಹಕರಿಸಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
1
