ನಗರ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಪ್ಪನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

Dec 11, 2025 - 15:35
 0  24
ನಗರ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಪ್ಪನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

   ಚನ್ನರಾಯಪಟ್ಟಣ: ನಗರ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಪ್ಪನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ದಲಿತಪರ ಸಂಘಟನೆಗಳ ಮುಖಂಡರುಗಳನ್ನು ಮನವಲಿಸುವಲ್ಲಿ ಸಫಲರಾದ ಡಿವೈಎಸ್ಪಿ ಎನ್ ಕುಮಾರ್ ಹಾಗೂ ಪೋಲಿಸ್ ವೃತ್ತ ನಿರೀಕ್ಷಕರಾದ ರಘುಪತಿ ಯಶಸ್ವಿಯಾದರು. ಪತ್ರಕರ್ತರೊಂದಿಗೆ ಡಿವೈಎಸ್ಪಿ ಕುಮಾರ್ ಮಾತನಾಡಿ ಮುಂದಿನ ಮೂರು ದಿನಗಳ ಒಳಗಾಗಿ ನಗರ ಠಾಣೆಯ ಪಿಎಸ್ಐ ಮಲ್ಲಪ್ಪನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.

ದಲಿತ ಮುಖಂಡ ಕೆ ಎನ್ ನಾಗೇಶ್ ಮಾತನಾಡಿ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಎರಡು ಮೂರು ದಿನದ ಒಳಗಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ದಿನದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದರು.

ಭೀಮ್ ಆರ್ಮಿಯ ಸಂಘಟನೆಯ ಜಿಲ್ಲಾಧ್ಯಕ್ಷ ಅಡಿಕೆ ಹೊಸೂರ್ ಪ್ರಸನ್ನ ಮಾತನಾಡಿ ಡಿವೈಎಸ್ಪಿ ಕುಮಾರ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಾದ ರಘುಪತಿ ಅವರ ಮನವಿಯ ಮೇರೆಗೆ ಈ ದಿನ ನಡೆಸಲು ಉದ್ದೇಶಿಸಿದ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದೇವೆ ಎಂದರು. 

ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೂರದಹಳ್ಳಿ ಶಿವಶಂಕರ್ ಕುಂಟೆ, ಟಿಎಪಿಸಿಎಂಎಸ್ ನ ನಿರ್ದೇಶಕರಾದ ಕೆ ಆರ್ ರವಿಕುಮಾರ್, ಮಾಜಿ ಪುರಸಭಾ ಸದಸ್ಯರಾದ ಪರಶುರಾಮ್, ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷ ಹೂಸೂರು ಪ್ರಸನ್ನ, ಉಪಾಧ್ಯಕ್ಷರಾದ ನಾಗಸಮುದ್ರಬಾಲು, ಜಿ ಕೆ ಮಂಜುನಾಥ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಕೆಎನ್ ನಾಗೇಶ್, ಬಿ ಎಸ್ ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸಿ ಜಿ ಸೋಮಶೇಖರ್, ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಕುರುವಂಕ ಮಂಜು, ಮಾದಿಹಳ್ಳಿ ಮಂಜು, ದಲಿತ ಮುಖಂಡರುಗಳಾದ ಕೆ ವಿ ಸತೀಶ್, ಲಕ್ಷ್ಮಣ್, ರಮೇಶ್, ಹರಿಪ್ರಸಾದ್, ಗೋವಿಂದಸ್ವಾಮಿ, ಸ್ವಾಗತಹಳ್ಳಿ ಮನೋಹರ, ನವಿಲೇ ಹೊಸೂರ್ ಸಂತೋಷ್, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456