ನಾಗಶೆಟ್ಟಿ ಹಳ್ಳಿಯಲ್ಲಿ ಸಂವಿಧಾನ ಶಿಲ್ಪಿಯ ಜಯಂತಿ ಸಂಭ್ರಮ: ಯುವಕರಿಂದ ಅರ್ಥಪೂರ್ಣ ಆಚರಣೆ
ಬೇತಮಂಗಲ: ಗ್ರಾಮದ ಯುವಕರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಇಂದು ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕೇಕ್ ಕತ್ತರಿಸುವ ಮೂಲಕ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ಸಮೀಪದ ನಾಗಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಯುವಕರು ಹಾಗೂ ಗ್ರಾಮಸ್ಥರು ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಆಸ್ತಿ. ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯನ್ನು ನಾವೆಲ್ಲರೂ ಅನುಸರಿಸಬೇಕು," ಎಂದು ಕರೆ ನೀಡಿದರು.
ಒಟ್ಟಾರೆಯಾಗಿ ನಾಗಶೆಟ್ಟಿ ಹಳ್ಳಿಯಲ್ಲಿ ಜಾತಿ-ಭೇದ ಮರೆತು ಎಲ್ಲರೂ ಒಂದಾಗಿ ಅಂಬೇಡ್ಕರ್ ಜಯಂತಿ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದರು.
ಮೆರವಣಿಗೆ ಉತ್ಸವ: ಜೈ ಭೀಮ್" ಘೋಷಣೆಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ. ನಂತರ ಬೇತಮಂಗಲಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ನೂರಾರು ಯುವಕರು ಉಪಸ್ಥಿತರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
1
Wow
0
