ನಾಡಪ್ರಭು ಕೆಂಪೇಗೌಡರವರ 516 ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಕೆಂಪೇಗೌಡರ ವೃತ್ತದಲ್ಲಿ 516 ನೇ ಕೆಂಪೇಗೌಡರ ಜಯಂತಿಯನ್ನು ಗ್ರಾಮದ ಮುಖಂಡರ ಸಹಕಾರದೊಂದಿಗೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಕೆ ಪಿ ಸಿ ಸಿ ಸದಸ್ಯ ಕಿಕ್ಕೇರಿ ಸುರೇಶ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಉಪಾದ್ಯಕ್ಷ ಕೆ ಎಸ್ ಪ್ರಭಾಕರ್ ಮತ್ತು ನೂರಾರು ಮುಖಂಡರು ನಾಡ ಪ್ರಭು ಕೆಂಪೇಗೌಡ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೇರವೇರಿಸಿದ್ರು
ನಂತರ ವಿಶ್ರಾಂತ ಪ್ರಾಶುಂಪಾಲರಾದ ಚಂದ್ರಮೋಹನ್ ಮಾತನಾಡಿದ ಅವರು ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಕರು ಕೆಂಪೇಗೌಡರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ದೇಶ ಸೇವೆಗೆ ಶ್ರಮಿಸುವಂತೆ ಕರೆ ನೀಡಿದರು. ಬೆಂದಕಾಳೂರು ಎಂಬ ಊರನ್ನು ಪ್ರಪಂಚದಲ್ಲಿರುವ ದೊಡ್ಡ ನಗರಗಳಲ್ಲಿ ಬೆಂಗಳೂರು ಬೃಹತ್ ಪ್ರಮಾಣದಲ್ಲಿ ಬೆಳೆದಿರುವುದು ಅದಕ್ಕೆ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿದೆ ಕೆಂಪೇಗೌಡರು ಒಂದು ಜಾತಿಯ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ ಪ್ರತಿಯೊಂದು ಸಮುದಾಯದ ಪರವಾಗಿ ಕೆಲಸ ಮಾಡಿದ ರಾಜರಾಗಿದ್ದಾರೆ ಅಂದೇ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯಕ್ಕೆ ಒಂದೊಂದು ಪೇಟೆಗಳನ್ನು ನಿರ್ಮಾಣ ಮಾಡಿದ್ದರು ಇಂದು ಹಳ್ಳಿಗಳಿಂದ ಬೆಂಗಳೂರಿಗೆ ಯುವಕರು ಉದ್ಯೋಗವನ್ನು ಅರಸಿಕೊಂಡು ವಲಸೆ ಹೋಗುತ್ತಿದ್ದಾರೆ ಎಂದರೆ ಬೆಂಗಳೂರು ನಗರ ಆಕರ್ಷಣೆ ಯಾಗಿದೆ ಎಂದರೆ ಅದಕ್ಕೆ ಕೆಂಪೇಗೌಡರ ಕಾಲದಲ್ಲಿ ನಗರ ನಿರ್ಮಾಣ ಕಾರ್ಯದಲ್ಲಿ ಕೈಗೊಂಡಿರುವ ಯೋಜನೆಗಳೇ ಸಾಕ್ಷಿಯಾಗಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಐದು ಜನ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು, ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಉಪಾದ್ಯಕ್ಷ ಕೆ ಎಸ್ ಪ್ರಭಾಕರ್, ಕೆ.ಪಿ.ಸಿ.ಸಿ ಸದಸ್ಯ ಕಿಕ್ಕೇರಿ ಸುರೇಶ್, ಜೆ.ಡಿ.ಎಸ್ ಹೋಬಳಿ ಘಟಕದ ಅಧ್ಯಕ್ಷ ಕಾಯಿ ಮಂಜೇಗೌಡ, ತಾಲ್ಲೂಕು ಬಿ.ಜೆ.ಪಿ ಉಪಾಧ್ಯಕ್ಷ ಬಾರತಿಪುರ ಪುಟ್ಟಣ್ಣ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಮಲ್ಲೇಶ್ ಕೋಡಿಮರನಹಳ್ಳಿ ಮಂಜೇಗೌಡ, ಜಿಲ್ಲಾ ಕಾಂಗ್ರೇಸ್ ವಕ್ತಾರ ಮಾದಪುರ ರಾಮಕೃಷ್ಣೇಗೌಡ್ರು, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಡ್ಡರಹಳ್ಳಿ ರವಿ, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸೊಳ್ಳೇಪುರ ಜಯರಾಮು, ಕೆ.ಜಿ ಪುಟ್ಟರಾಜು, ಕಾಯಿ ಸುರೇಶ್, ಲಕ್ಷ್ಮೀಪುರ ಚಂದ್ರೇಗೌಡ, ಗಂಗ್ಗೇನಹಳ್ಳಿ ರಘು, ಕಡಹೆಮ್ಮಿಗೆ ರಮೇಶ್, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ದರ್ಮಪ್ಪ, ಮುಖಂಡರಾದ ಕೆ.ಜಿ ತಮ್ಮಣ್ಣ, ಕಾಳೇನಹಳ್ಳಿ ಸುರೇಶ್, ಮಧು, ಮೆಡಿಕಲ್ ಸತ್ಯ, ಸುರೇಶ್, ಜೇಟುಸಿಂಗ್, ಅಕ್ಷಯ್, ಸೇರಿದಂತೆ ಕಿಕ್ಕೇರಿ, ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಮುಖಂಡರುಗಳು ಹಾಜರಿದ್ದರು...
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
