ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ಕೆಂಪೇಗೌಡರ 516ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು

Jun 27, 2025 - 17:33
 0  5
ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ಕೆಂಪೇಗೌಡರ 516ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು

ಚನ್ನರಾಯಪಟ್ಟಣ: ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ಕೆಂಪೇಗೌಡರ 516ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಪಟ್ಟಣದ ಬಾಲಾಜಿ ಚಿತ್ರಮಂದಿರದ ಪಕ್ಕದಲ್ಲಿರುವ ನಾಡಪ್ರಭು ಕೆಂಪೇಗೌಡ ವೇದಿಕೆಯ ಪ್ರಧಾನ ಕಚೇರಿಯಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಅನಂತರ ಕಚೇರಿಯ ಮುಂಭಾಗದಿಂದ ಕೆಂಪೇಗೌಡ ಭಾವಚಿತ್ರವನ್ನು ಬೆಳ್ಳಿಯ ರಥದ ಮೆರವಣಿಗೆಯೊಂದಿಗೆ ಹೊಸ ಬಸ್ ಸ್ಟ್ಯಾಂಡ್ ನಿಲ್ದಾಣ ಮಾರ್ಗವಾಗಿ ಸಾಗಿ  ಕೆಂಪೇಗೌಡ ಸರ್ಕಲ್ ನಲ್ಲಿ ಕೆಂಪೇಗೌಡರವರ ನಾಮಫಲಕಕ್ಕೆ ಹೂವಿನ ಪುಷ್ಪಾರ್ಚನೆ ಮಾಡಿದರು. ಆನಂತರ ಕಾಳೆನಹಳ್ಳಿ ಆನಂದ್  ಮಾತನಾಡಿ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡುತ್ತಿರುವುದು ತುಂಬಾ ಸಂತೋಷ ವಿಚಾರ ಎಂದರು, ಮುಂದಿನ ದಿನಗಳಲ್ಲಿ ಕೆಂಪೇಗೌಡ ಸರ್ಕಲ್ ನಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಬೇಕೆಂದು ಒತ್ತಾಯ ಮಾಡಿದರು. ಇದೇ ಸಂದರ್ಭದಲ್ಲಿ ಆನಂದ್ ಕುಮಾರ್, ವಸ್ತ್ರ ವಿನ್ಯಾಸಕ ಮಲ್ಲವನಘಟ್ಟ ನಾಗರಾಜ್, ವೆಂಕಟೇಶ್, ನವೀನ್, ಕೆರೆ ಬೀದಿ ಜಗದೀಶ್,ಡಿ ಎಂ ರವಿ,ಬಾಬು,ಉಮೇಶ್, ಸುರೇಶ್ ಗೌಡ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456