ನಿಗದಿತ ಸಮಯಕ್ಕೆ ಗುರಿ ಸಾಧಿಸುವುದು ಎಲ್ಲಾ ಅಧಿಕಾರಿಗಳ ಆದ್ಯ ಕರ್ತವ್ಯ
ನಿಗದಿತ ಸಮಯಕ್ಕೆ ಗುರಿ ಸಾಧಿಸುವುದು ಎಲ್ಲಾ ಅಧಿಕಾರಿಗಳ ಆದ್ಯ ಕರ್ತವ್ಯ. ಈ ಸೂಚನೆಗೆ ಅನುಗುಣವಾಗಿ ಎಲ್ಲರೂ ಕಾರ್ಯನಿರ್ವಾಹಿಸಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗಂಭೀರವಾಗಿ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರವು ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಅದರಂತೆ ನಾವೆಲ್ಲರೂ ಪೂರಕವಾಗಿ ಪ್ರಗತಿಯತ್ತ ಕಡ್ಡಾಯವಾಗಿ ಶ್ರಮವಹಿಸಬೇಕು ಎಂದು ಹೇಳಿದರು.
ಚಿಕ್ಕನಾಯಕನಹಳ್ಳಿ ನಗರಕ್ಕೆ ಭೇಟಿ ನೀಡುವ ಮೂಲಕ, ಸ್ವಚ್ಛತೆಗೆ ಹೆಚ್ಚು ಹೊತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮೊದಲು ಅಮೃತ ಯೋಜನೆಯಡಿ ಚಿಕ್ಕನಾಯಕನಹಳ್ಳಿ ಕೆರೆ ಸಮಗ್ರ ಅಭಿವೃದ್ಧಿಗೆ ಆಯ್ಕೆಯಾದ ಕಾರಣ ಸ್ಥಳಕ್ಕೆ ಭೇಟಿ ನೀಡುವ ಮೂಲಕ, ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಸಂಬಂಧಿಸಿದ ಅಧಿಕಾರಿಗೆ ಸೂಚಿಸಿದರು. ತದನಂತರ ನಗರದ ಮಹಾಲಕ್ಷ್ಮೀ ಬಡಾವಣೆ ಪಾರ್ಕ್, ವೆಂಕಣ್ಣನಕಟ್ಟೆ ಪಾರ್ಕ್,ಕೊಡಗಲ್ ರಸ್ತೆ ಪಾರ್ಕ್ , ಪ್ರಧಾನ್ ಮಂತ್ರಿ ಅವಾಜ್ ಯೋಜನೆಯಡಿ 410 ನಿವೇಶನದ ಸ್ಥಳಕ್ಕೆ ಭೇಟಿ ನೀಡಿದರು. ತದನಂತರ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಆಶ್ರಯ ನಿವೇಶನ ಮಂಜೂರಾದ ಸ್ಥಳ ಪರಿಶೀಲಿಸುವ ಮೂಲಕ ಕಾಮಗಾರಿಗಳ ಸ್ಥಳದಲ್ಲಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಉಪಕಾರ್ಯದರ್ಶಿಗಳಾದ ಸಂಜೀವಪ್ಪ ರವರು ಮಾತನಾಡಿ, ಯಾವುದೇ ಯೋಜನೆಗಳಿಂದ ಫಲಾನುಭವಿಗಳಿಗೆ ಅನಾನುಕೂಲ ಉಂಟಾಗದಂತೆ ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ತಾಲ್ಲೂಕಿನ ಪ್ರಗತಿ ಯಾವುದರಲ್ಲೂ ಕಡಿಮೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಮುತುವರ್ಜಿ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.
ತದನಂತರ ನರೇಗಾ ಯೋಜನೆ ಕುರಿತು ಮಾನವ ದಿನಗಳ ಸೃಜನೆ, ಇ-ಕೆವೈಸಿ ನೋಂದಣಿ ಪ್ರಗತಿ ಹೆಚ್ಚಿಸಬೇಕು. ನಿಗದಿತ ಸಮಯಕ್ಕೆ ಎಲ್ಲಾ ಯೋಜನೆಗಳ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೊಡ್ಡಸಿದ್ದಯ್ಯ ಅವರು, ತಹಸಿಲ್ದಾರ್ ಮಮತ ಅವರು, ಸಹಾಯಕ ಕಮಿಷನರ್ ಆದ ಸಪ್ತಶ್ರೀ ಅವರು, ಸಹಾಯಕ ನಿರ್ದೇಶಕರಾದ ಇಂದ್ರೇಶ್ ಅವರು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ವ್ಯವಸ್ಥಾಪಕರಾದ ಬಸವರಾಜು ಅವರು (ತಾಪಂ), ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು, 27 ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಇತರರು ಹಾಜರಿದ್ದರು.
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
