ನಿವೃತ್ತ ಪೊಲೀಸ್ ಅಧಿಕಾರಿಗೆ ಹಾರ್ಥಿಕ ಬೀಳ್ಕೊಡುಗೆ ಕಾರ್ಯಕ್ರಮ
ಕೆಜಿಎಫ್,ಡಿ.1: ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯು ಸಹಜವಾಗಿದ್ದು, 60 ವರ್ಷ ವಯಸ್ಸು ತುಂಬಿದ ಮೇಲೆ ಸರ್ಕಾರಿ ಸೇವೆಯಿಂದ ನಿವೃತ್ತರಾಗುತ್ತಾರೆ. ನಿವೃತ್ತರಾಗುವ ಅಧಿಕಾರಿ, ಸಿಬ್ಬಂದಿಗಳ ಸೇವೆಯು ಶ್ಲಾಘನೀಯವಾಗಿದ್ದು, ಅನುಭವಿ ಅಧಿಕಾರಿಗಳ ಸೇವೆ, ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಕೆಜಿಎಫ್ ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಶಿವಾಂಶು ರಜಪೂತ್ ಅವರು ಕರೆ ನೀಡಿದರು
.
ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಸುದೀರ್ಘವಾದ ಸೇವೆ ಸಲ್ಲಿಸಿ, ನ.30 ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಯನ್ನು ಹೊಂದಿದ ಎ.ಆರ್.ಎಸ್.ಐ. ಎ.ರಾಮರಾಜು ರವರಿಗೆ ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಸ್ಪಿ ಶಿವಾಂಶು ರಜಪೂತ್ ಅವರು ಮಾತನಾಡಿದರು.
ಕೆಜಿಎಫ್ ಘಟಕದಲ್ಲಿ ಪ್ರಸ್ತುತ ನಿವೃತ್ತಿ ಹೊಂದಿದ ಎ.ಆರ್.ಎಸ್.ಐ. ಎ.ರಾಮರಾಜು ರವರು ಪೊಲೀಸ್ ಇಲಾಖೆಯಲ್ಲಿ ಸುಮಾರು 35 ವರ್ಷಗಳ ಕಾಲ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ. ಇವರ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು.
ನಿವೃತ್ತರು ನಿವೃತ್ತಿ ಸಮಯದಲ್ಲಿ ಬರುವ ಮೂಲ ಮೊತ್ತವನ್ನು ಯೋಜಿತ ರೀತಿಯಲ್ಲಿ ಹೂಡಿಕೆ ಮಾಡಿ ಯಾವುದೇ ರೀತಿಯ ಆನ್ಲೈನ್ ವಂಚನೆ ಹಾಗೂ ಇತರೆ ಆಮಿಷಗಳಿಗೆ ಒಳಗಾಗದೆ ಎಚ್ಚರಿಕೆಯಿಂದಿರಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಶಿವಾಂಶು ರಜಪೂತ್ ಅವರು ಕರೆ ನೀಡಿದರು.
ಇಲಾಖೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಎ.ಆರ್.ಎಸ್.ಐ ಎ. ರಾಮರಾಜು ರವರಿಗೆ ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಆರ್.ಪಿ.ಐ. ವಿ.ಸೋಮಶೇಖರ್ ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
• ಚಿತ್ರಶಿರ್ಷಿಕೆ: 01 ಕೆಜಿಎಫ್ 01: ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸನ್ಮಾನಿಸಿದ ಎಸ್ಪಿ ಶಿವಾಂಶು ರಜಪೂತ್ ಇತರರು
What's Your Reaction?
Like
2
Dislike
0
Love
1
Funny
0
Angry
0
Sad
0
Wow
0
