ನೀರಿನ ಘಟಕದ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯಿತಿ ಅಧಿಕಾರಿಗಳು
ಬೇತಮಂಗಲ: ಕೆ ಜಿ ಎಫ್ ತಾಲ್ಲೂಕಿನ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾರೆಡ್ಡಿ ದಿನ್ನೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ಪ್ರಸಾರವಾಗುತಿದ್ದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ್ ಮೂರ್ತಿ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯಿತಿ ಅಧಿಕಾರಿಗಳು ಗ್ರಾಮಸ್ಥರಿಗೆ ಎರಡು ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ಥಿಗೋಳಿಸುತ್ತೇವೆ ಎಂದು ಭರವಸೆ ನೀಡಿದರು.
ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ವೃದ್ಧರು ಇದ್ದು ಈ ಭಾಗದಲ್ಲಿ ಹೆಚ್ಚಿನ ಪ್ಲೋರೆಡ್ ಮಿಶ್ರಿತ ಕುಡಿಯುವ ನೀರನ್ನು ಬಳಸುವ ಪರಿಸ್ಥಿತಿ ಉಂಟಾಗಿದೆ ಶೀಘ್ರದಲ್ಲಿ ಎಚ್ಚೆತ್ತಿಕೊಂಡು ನೀರಿನ ಘಟಕವನ್ನು ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಮನವಿಮಾಡಿದರು.
ಈ ಸಂದರ್ಭದಲ್ಲಿ ಕರ ವಸೂಲಿಗಾರ ವೆಂಕಟರಾಮಪ್ಪ, ಗ್ರಾಮದ ಜಲಗಾರರಾದ ನಾರಾಯಣಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
