ನೂತನವಾಗಿ ಎಸ್. ಪಿ. ಶುಭಾನ್ವಿತರವರಿಗೆ ಸ್ವಾಗತ: ಹೆಚ್. ಎಸ್. ಪ್ರತಿಮಾ ಹಾಸನ್

Jan 23, 2026 - 00:03
 0  17
ನೂತನವಾಗಿ  ಎಸ್. ಪಿ. ಶುಭಾನ್ವಿತರವರಿಗೆ ಸ್ವಾಗತ: ಹೆಚ್. ಎಸ್. ಪ್ರತಿಮಾ ಹಾಸನ್

22:01:25 ರಂದು ಎಸ್. ಪಿ. ಕಚೇರಿಯಲ್ಲಿ ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿ(ರಿ) ಹಾಗೂ ಪ್ರತಿಮಾ ಸಾಮಾಜಿಕ, ಸಾಂಸ್ಕೃತಿಕ ಟ್ರಸ್ಟ್ (ರಿ) ಸಹಯೋಗದಲ್ಲಿ ನೂತನವಾಗಿ ಹಾಸನ ಜಿಲ್ಲೆಗೆ ಆಗಮಿಸಿರುವ ಎಸ್. ಪಿ. ಶುಭಾನ್ವಿತ ಮೇಡಂ ರವರನ್ನು ಭೇಟಿಮಾಡಿ ಹಲವಾರು ಸಮಸ್ಯೆಗಳನ್ನು ಚರ್ಚಿಸುತ್ತಾ ಸಮಸ್ಯೆಗಳನ್ನು ಬಗೆಹರಿಸಬೇಕಾಗಿ ವಿನಂತಿಸಿಕೊಳ್ಳಲಾಯಿತು. ನಂತರ ಎಲ್ಲರೂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

 ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಚರ್ಚಿಸುತ್ತಾ ಅಹಿತಕರ ಘಟನೆಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿ ಹಾಗೂ ಹೆಣ್ಣು ಮಕ್ಕಳಿಗೆ ಹೆಚ್ಚಿನ ರಕ್ಷಣೆಯ ಅವಶ್ಯಕತೆ ಇದೆ ಎಂದು ತಿಳಿಸುತ್ತಾ ಹಾಸನದಲ್ಲಿ ಗಾಂಜಾ, ಡ್ರಕ್ಸ್, ಹೆಚ್ಚಾಗಿದೆ. ಗಾಂಜಾ, ಡ್ರಕ್ಸ್, ಹಾವಳಿಯ ನಿರ್ಣಮಾ ಮಾಡುವಂತೆ ಸಮಿತಿ ಹಾಗೂ ಟ್ರಸ್ಟ್ ವತಿಯಿಂದ ಕೇಳಿಕೊಳ್ಳಲಾಯಿತು ಹಾಗೂ ನಿಮ್ಮಂತ ಮಹಿಳಾ ಅಧಿಕಾರಿಗಳು ಅನೇಕ ಮಹಿಳೆಯರಿಗೆ ಸ್ಫೂರ್ತಿ ಎಂದು ಶುಭಾನ್ವಿತ ಮೇಡಂ ರವರನ್ನು ಕುರಿತು ಆಶುಕವಿತೆಯನ್ನು ಸಾಹಿತಿ. ಶಿಕ್ಷಕಿ. ಸಮಾಜ ಸೇವಕಿ, ಸಮಿತಿಯ ಹಾಸನ ಮಹಿಳಾ ಜಿಲ್ಲಾಧ್ಯಕ್ಷೆ ಹಾಗೂ ಟ್ರಸ್ಟ್ ನ ಸಂಸ್ಥಾಪಕರು ಹೆಚ್. ಎಸ್. ಪ್ರತಿಮಾ ಹಾಸನ್ ತಿಳಿಸಿದರು.

ನಂತರ ಹಾಸನ ನಗರದ ಸಮಸ್ಯೆಗಳಿಗೆ ಶೀಘ್ರ ಪರಿಹಾರವನ್ನು ನೀಡಬೇಕಾಗಿ ಸಮಿತಿಯ ಜಿಲ್ಲಾಧ್ಯಕ್ಷ ರವಿಕಿರಣ್ ವಿನಂತಿಸಿಕೊಂಡರು. ಎಲ್ಲಾ ಸಮಸ್ಯೆಗಳನ್ನು ಕೇಳಿ ಎಸ್ ಪಿ ರವರು ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ರಮ್ಯಾ, ಧರಣೇಶ್ , ಮೋಹನ್ , ವೇಣು ಇನ್ನೂ ಹಲವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456