ಪರಿಶಿಷ್ಟ ಜನಾಂಗದ ಒಳಮೀಸಲಾತಿ ಸಮಗ್ರ ಸಮೀಕ್ಷೆಗೆ ಚಾಲನೆ ನೀಡಿದ ಶಾಸಕಿ ರೂಪಕಲಾ

May 8, 2025 - 16:27
 0  4
ಪರಿಶಿಷ್ಟ ಜನಾಂಗದ ಒಳಮೀಸಲಾತಿ ಸಮಗ್ರ ಸಮೀಕ್ಷೆಗೆ ಚಾಲನೆ ನೀಡಿದ ಶಾಸಕಿ ರೂಪಕಲಾ

ಕೆಜಿಎಫ್: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಡಾಕ್ಟರ್ ಎಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯಕ್ರಮಕ್ಕೆ ಕೆಜಿಎಫ್ ತಾಲೂಕಿನ ಶಾಸಕಿ ರೂಪಕಲಾ ಚಾಲನೆ ನೀಡಿದರು

 ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳ ಆರ್ಥಿಕ ಸಾಮಾಜಿಕ ಶೈಕ್ಷಣಿಕ ರಾಜಕೀಯ ಸ್ಥಿತಿಗತಿಗಳ ವಾಸ್ತವ ಅಂಶವನ್ನು ಅರಿಯಲು ರಾಜ್ಯಾದ್ಯಂತ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಮತ್ತು ಗಣತಿದಾರರು ಈ ಸಮೀಕ್ಷೆ ಒಳಪಟ್ಟಂತೆ ಸಾರ್ವಜನಿಕರ ಮನೆಗಳ ಬಳಿ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ ಅದರಿಂದ ಸಾರ್ವಜನಿಕರು ತಮ್ಮ ಉಪಜಾತಿಯನ್ನು ತಪ್ಪದೇ ನಮೂದಿಸಿ ನಿಖರ ಮಾಹಿತಿಯನ್ನು ಗಣತಿ ದಾರರಿಗೆ ನೀಡಿ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಉಪಜಾತಿಯನ್ನು ನಮೂದಿಸಿ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಜಾತಿಯ ಮಾಹಿತಿಯನ್ನು ನೀಡುತ್ತಿದ್ದಾರೆ ಆದರೆ ಸಾರ್ವಜನಿಕರು ತಮ್ಮ ಉಪಜಾತಿಯ ನಿಖರವಾದ ಮಾಹಿತಿಯನ್ನು ನೀಡಿದರೆ ಹೆಚ್ಚು ಸಹಕಾರಿಯಾಗುತ್ತದೆ ಇದರಿಂದ ಯಾವುದೇ ನಿಮ್ಮ ಜಾತಿಗೆ ಗಣತೆ ಗೌರವಕ್ಕೆ ಧಕ್ಕೆ ಬರುವುದಿಲ್ಲ ಗಣತಿ ದಾರರಿಗೆ ನಿಖರವಾದ ಮಾಹಿತಿಯನ್ನು ನೀಡಿ ಸಹಕರಿಸಬೇಕೆಂದು ಶಾಸಕಿ ರೂಪಕಲಾ ಸಾರ್ವಜನಿಕರಲ್ಲಿ ಮನವಿ ಮಾಡಿದರು.

 ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗವೇಣಿ ಪೌರಯುಕ್ತ ಪವನ್ ಕುಮಾರ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿದೇವಿ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ. ಶಿಕ್ಷಕರು ಹಾಗೂ ಸಾರ್ವಜನಿಕರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456