ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ
ಚನ್ನರಾಯಪಟ್ಟಣ: ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಹಾಸನ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಪತ್ರಕರ್ತರ ಭವನದಲ್ಲಿ ಮಾತನಾಡಿ ಅವರು ಇದೇ ತಿಂಗಳು 21ನೇ ತಾರೀಕು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ 6,000ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಲಿದ್ದಾರೆ, ಅದೇ ರೀತಿ ನಮ್ಮ ಜಿಲ್ಲೆಯಿಂದ 1000 ದಲಿತ ಕಾರ್ಯಕರ್ತರು ಪಾಲ್ಗೊಳ್ಳುವುದಾಗಿ ತಿಳಿಸಿದರು. ನಮ್ಮ ಚನ್ನರಾಯಪಟ್ಟಣ ತಾಲೂಕಿನ ದಲಿತ ಸಂಘಟನೆಯ ಎಲ್ಲಾ ಮುಖಂಡರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಆರ್ ಮಂಜುನಾಥ್, ಮಧು, ರಮೇಶ್, ಲಕ್ಷ್ಮಯ್ಯ, ಕಿಶೋರ್, ರಮೇಶ್, ಬಾಲಚಂದ್ರ, ರುದ್ರೇಶ್ ಸೇರಿದಂತೆ ಇತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
