ಪಾರಂಡಹಳ್ಳಿ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು
ಕೆಜಿಎಫ್: ನಗರದ ಹೊರವಲಯದ ಪಾರಂಡಹಳ್ಳಿ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್. ಅನಿಲ್ ಕುಮಾರ್. ಈಗ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಮ್ಮಿ ಇಲ್ಲ ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಹಲವಾರು ಉನ್ನತ ಸ್ಥಾನಗಳಲ್ಲಿ ಇದ್ದಾರೆ. ಪೋಷಕರು ಸರ್ಕಾರಿ ಶಾಲೆ ಎನ್ನುವ ಮನೋಭಾವ ಬಿಡಬೇಕು. ಪ್ರತಿಯೊಬ್ಬ ಮಕ್ಕಳು ಮೌಲ್ಯಗಳನ್ನು ಅಳವಡಿಸಿಕೊಂಡಾಗ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರು.ಪಿ. ವಿ. ಶ್ರೀನಿವಾಸ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತದೆ ಅದೇ ರೀತಿಯಾಗಿ ಈ ವರ್ಷದಿಂದ ಕನ್ನಡ ಮಾಧ್ಯಮ ಜೊತೆಗೆ ಆಂಗ್ಲ ಮಾಧ್ಯಮ ಒಂದನೇ ತರಗತಿಯಿಂದ ಪ್ರಾರಂಭವಾಗುತ್ತದೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸಿ ಎಂದು ಕರೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ. ರಾಜಶ್ರೀ ಮಾತನಾಡಿ ನಾನು ಈ ಶಾಲೆಗೆ ಆಗಮಿಸಿ ನಾಲ್ಕು ವರ್ಷ ಕಳೆದಿದೆ ಶಾಲೆಯ ಅಭಿವೃದ್ಧಿಗೆ ನಾನು ದಾನಿಗಳನ್ನು ಹಿಡಿದುಕೊಂಡು ಕೈಯಲ್ಲಾದ ಕೆಲಸವನ್ನು ಮಾಡಿದ್ದೇನೆ. ನನ್ನ ಶಾಲೆ ವಾರ್ಷಿಕೋತ್ಸವ ಸಮಾರಂಭ ಯಾವುದಕ್ಕೂ ಕಮ್ಮಿ ಇರಬಾರದು ಈ ನಿಟ್ಟಿನಲ್ಲಿ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಇದು ಒಂದು ಒಳ್ಳೆ ವೇದಿಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ. ಸುಬ್ಬರೆಡ್ಡಿ. ಶ್ರೀನಿವಾಸ್. ಎಸ್ ಡಿ ಎಂ ಸಿ ಸದಸ್ಯರು. ಕೃಷ್ಣಮೂರ್ತಿ ಸಿಬ್ಬಂದಿ ವರ್ಗ ಹಾಜರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
