ಪುಣ್ಯ ಕ್ಷೇತ್ರ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ 11 ಸಹಸ್ರ ದೀಪೋತ್ಸವ
ಮಾಡಾಳು ಗ್ರಾಮದ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ನ 30 ರಂದುಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಅಪ್ಪಣೆ ಮೇರೆಗೆ ಮತ್ತು ಶ್ರೀಗಳ ದಿವ್ಯ ಸಾನಿಧ್ಯ ದಲ್ಲಿ 11 ಸಹಸ್ರ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ ಸ್ವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌರಮ್ಮ ದೇವಿ ಸೇವಾ ಟ್ರಸ್ಟ್ ಸಮಿತಿ ಅಧ್ಯಕ್ಷ ಎಂಎಸ್ ನಟರಾಜ್ 2ನೇ ವರ್ಷದ ಕಾರ್ತಿಕ ದೀಪೋತ್ಸವ ಕಾರ್ಕ್ರಮದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆಎಂ ಶಿವಲಿಂಗೇಗೌಡ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು ರಾಂಪುರ ಶ್ರೀ ನಿರ್ವಾಣ ಸಿದ್ದೇಶ್ವರ ಭಜನ ಮಂಡಳಿ ತಂಡದವರಿಂದ ಭಜನೆ ಹಾಗೂ ಗೀತಾ ಗಾಯನ ಕಾರ್ಯಕ್ರಮ ಆಯೋಜಿಸಿದ್ದು ರಾಜಕೀಯ ಮುಖಂಡರು ಸಾಹಿತಿಗಳು ಭಾಗವಹಿಸಲಿದ್ದಾರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಮನವಿ ಮಾಡಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
