ಬಿರುಗಾಳಿಗೆ ಬಿದ್ದ ಮರಕ್ಕೆ ಬೈಕ್ ಡಿಕ್ಕಿ 43 ವರ್ಷದ ವ್ಯಕ್ತಿ ಸ್ಥಳದಲ್ಲೇ ಸಾವು
ಭಾಗ್ಯನಗರ: ಮಂಗಳವಾರ ರಾತ್ರಿ ಸುರಿದ ಗುಡುಗು ಮಿಂಚಿನ ಭಾರೀ ಮಳೆಯ ಬಿರುಗಾಳಿಯಿಂದ ರಸ್ತೆಗೆ ಬಿದ್ದಿದ್ದ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೇವರೆಡ್ಡಿಪಲ್ಲಿ ಗ್ರಾಮದ 43 ವರ್ಷದ ಆನಂದ ಕುಮಾರ್ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಮಳೆ ಮತ್ತು ಬಿರುಗಾಳಿಯಿಂದ ರಸ್ತೆ ಮಧ್ಯೆ ಬಿದ್ದಿದ್ದ ಮರ ಕತ್ತಲಿನಲ್ಲಿ ಕಾಣದೆ, ಅದಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದ್ದು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನಂದ ಕುಮಾರ್ ಅವರು ಮೃತಪಟ್ಟಿದ್ದಾರೆ.
ಈ ಘಟನೆ ಪ್ರಕೃತಿ ವಿಕೋಪದಿಂದ ಅಮಾಯಕ ವ್ಯಕ್ತಿಯೊಬ್ಬರು ಬಲಿಯಾಗಿರುವುದಾಗಿ ಗ್ರಾಮಸ್ಥರು ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿರುಗಾಳಿಯಿಂದ ರಸ್ತೆಗಳಲ್ಲಿ ಮರಗಳು ಬೀಳುವಂತಹ ಘಟನೆಗಳು ಸಂಭವಿಸುತ್ತಿರುವುದರಿಂದ, ರಾತ್ರಿ ವೇಳೆ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ....
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
