ಬೀರಲಿಂಗೇಶ್ವರ ದೇವಸ್ಥಾನ ಕಾರ್ಯ ಸಮಾಜಮುಖಿಯಾಗಿದೆ: ಬಂಡೆಪ್ಪ ಖಾಶೆಂಪುರ್

Mar 9, 2026 - 18:34
Mar 9, 2026 - 18:34
 0  7
ಬೀರಲಿಂಗೇಶ್ವರ ದೇವಸ್ಥಾನ  ಕಾರ್ಯ ಸಮಾಜಮುಖಿಯಾಗಿದೆ: ಬಂಡೆಪ್ಪ ಖಾಶೆಂಪುರ್
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೀದರ್ (ಮಾ.09):ಬೀದರ್ ನಗರದ ಕುಂಬಾರವಾಡದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ನವರ ಕಾರ್ಯ ಸಮಾಜಮುಖಿಯಾಗಿದೆ. ಟ್ರಸ್ಟ್ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು‌.

ಬೀದರ್ ನಗರದ ಕುಂಬಾರವಾಡದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ಶ್ರೀ ಬೀರಲಿಂಗೇಶ್ವರ, ಶ್ರೀ ಮಾಳಿಂಗರಾಯ, ಶ್ರೀ ಮಹಾತ್ಮ ಬೊಮ್ಮಗೊಂಡೇಶ್ವರ ದೇವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಹಾಗೂ ಸಭಾಭವನ, ಈರಕರ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೀದರ್ ನಗರದಲ್ಲಿನ ಬೀರಲಿಂಗೇಶ್ವರ ದೇವಸ್ಥಾನಕ್ಕೆ ತನ್ನದೇಯಾದ ಇತಿಹಾಸವಿದೆ. ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿಯ ಸದಸ್ಯರ ಪ್ರಯತ್ನದಿಂದ ದೇವಸ್ಥಾನವು ಚನ್ನಾಗಿ ಆಗಿದೆ. ಅಷ್ಟೇ ಅಲ್ಲದೇ ಸಮಾಜದ ಜನರು ತನು, ಮನ, ಧನದಿಂದ ಸಹಾಯ, ಸಹಕಾರ ನೀಡಿದ್ದಾರೆ. ಎಲ್ಲರ ಸಹಕಾರದಿಂದ ದೇವಸ್ಥಾನ ಅಭಿವೃದ್ಧಿ ಆಗ್ತಿದೆ. 

ದೇವಸ್ಥಾನದ ಒಳಗಡೆ ಬೀರಲಿಂಗೇಶ್ವರ, ಮಾಳಿಂಗರಾಯ, ಬೊಮ್ಮಗೊಂಡೇಶ್ವರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ದೇವ್ಥಸಾನಕ್ಕೆ ಗಾಂಧಿ ಗಂಜ್ ನವರ ಸಹಕಾರವು ಇದೆ. ಇಟ್ಗಂಪಳ್ಳಿರವರ ಗುಂಪು ಸೇರಿದಂತೆ ಎಲ್ಲರೂ ಸೇರಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿಕೊಂಡು ಸಾಗುತ್ತಿದ್ದಾರೆ‌ ಎಂದು ಬಂಡೆಪ್ಪ ಖಾಶೆಂಪುರ್ ರವರು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು, ಬೀದರ್ ನಗರದಲ್ಲಿ ಬೀರಲಿಂಗೇಶ್ವರ, ಮಾಳಿಂಗರಾಯರ ದೇವಸ್ಥಾನ ಇರಲಿಲ್ಲ. ಈಗ ದೇವಸ್ಥಾನ ನಿರ್ಮಾಣವಾಗಿದೆ. ಪ್ರತಿ ದಿನ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರ ನಡೆಯುವಂತೆ ನೋಡಿಕೊಂಡು ಸಾಗಬೇಕು ಎಂದರು.

ಸಮಾಜದ ಜನರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳೆಯರು ಮುಂದೆ ಬರಬೇಕು. ಹೆಣ್ಣು ಮಕ್ಕಳು ಓದಿನ ಕಡೆಗೆ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಹಳ್ಳಿಗಳಲ್ಲಿ ಮಹಿಳೆಯರೇ ಸಂಸಾರದ ಜವಾಬ್ದಾರಿ ಹೊತ್ತುಕೊಂಡು ಸಾಗುತ್ತಿದ್ದಾರೆ. ಅಂತಹ ಮಹಿಳೆಯರಿಗೆ ಶಿಕ್ಷಣ ಸಿಕ್ಕರೆ ಇನ್ನೂ ಅನುಕೂಲ ಆಗಲಿದೆ ಎಂದು ರಘುನಾಥರಾವ್ ಮಲ್ಕಾಪೂರೆರವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಗಳು ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೀದರ್ ಜಿಲ್ಲಾಧ್ಯಕ್ಷರಾದ ಅಮೃತರಾವ್ ಚಿಮ್ಕೋಡೆ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿಯ ಕಾರ್ಯಾಧ್ಯಕ್ಷರಾದ ಪಿ.ಎಸ್ ಇಟ್ಗಂಪಳ್ಳಿರವರು ಸೇರಿದಂತೆ ಅನೇಕರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456