ಬೇತಮಂಗಲದಲ್ಲಿ ವಹ್ನಿಕುಲ ಕ್ಷತ್ರಿಯರ ಬೃಹತ್ ಮಹಾಸಭೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಬೇತಮಂಗಲದಲ್ಲಿ ವಹ್ನಿಕುಲ  ಕ್ಷತ್ರಿಯರ ಬೃಹತ್ ಮಹಾಸಭೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೇತಮಂಗಲ: ವಹ್ನಿಕುಲ ಕ್ಷತ್ರಿಯ ವೀರಕುಮಾರರ ಸೇವಾ ಸಂಘದ ವತಿಯಿಂದ ಬೇತಮಂಗಲದಲ್ಲಿ ಬೃಹತ್ ಮಹಾಸಭೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು.

ಪಟ್ಟಣದ ಶ್ರೀ ದ್ರೌಪದಾಂಬೆ ದೇವಸ್ಥಾನದ ಸಮುದಾಯದ ಭವನದಲ್ಲಿ ಆಯೋಜಿಸಲಾಗಿದ್ದ ವಹ್ನಿಕುಲ ಕ್ಷತ್ರಿಯ ಮಹಾಸಭೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು, ಈ ವೇಳೆ ಸಮುದಾಯದ ಮುಖಂಡರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಿ ಸಮಾಜಕ್ಕೆ ಕೀರ್ತಿ ತರಬೇಕು ಮತ್ತು ಸಮಾಜದ ಸಂಘಟನೆ ಹಾಗೂ ಏಕತೆಯೇ ಅಭಿವೃದ್ಧಿಗೆ ಮೂಲವಾಗಿದ್ದು, ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಗೆ ಪ್ರೇರಣೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮಕ್ಕೆ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ಹಿಂದಿನ ದಿನಗಳಲ್ಲಿ ಸಮಾಜ ಪ್ರತಿಭಾ ವಂತ ವಿದ್ಯಾರ್ಥಿಗಳನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿತ್ತು ಇದೀಗ ನಮ್ಮ ಕೆಜಿಎಫ್ ತಾಲ್ಲೂಕಿನಲ್ಲಿ ಮೊದಲನೇ ಬಾರಿಗೆ ವಹ್ನಿಕುಲ ಕ್ಷತ್ರಿಯರ ವತಿಯಿಂದ ಆಯೋಜನೆ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬೃಹತ್ ಮಟ್ಟದಲ್ಲಿ ನಿರಂತರವಾಗಿ ಮಾಡುವುದಾಗಿ ತಿಳಿಸಿದರು. 

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಎಸ್ ಎಸ್ ಎಲ್ ಸಿ, 

ಪಿ, ಯು, ಸಿ, ಹಾಗೂ ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುವ ಕ್ಷತ್ರಿಯ ಸಮುದಾಯದ ಸುಮಾರು 60 ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಹೂ ಗುಚ್ಚ ನೀಡುವ ಮೂಲಕ ಸನ್ಮಾನಿಸಿ ಗೌರವಿಸಿದರು. 

ಈ ಸಂದರ್ಭದಲ್ಲಿ ವಹ್ನಿಕುಲ ಕ್ಷತ್ರಿಯ ವೀರಕುಮಾರರ ಸಂಘದ ಪದಾಧಿಕಾರಿಗಳು ಮತ್ತು ಸಮಾಜದ ಮುಖಂಡರು ಹಾಗೂ ಹಿರಿಯರು ಯುವಕರು ವಿದ್ಯಾರ್ಥಿಗಳಿದ್ದರು.