ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಮೂಲಭೂತ ಸೌಕರ್ಯ ಒದಗಿಸಲು ಡಿಜಿಪಿ ಆದೇಶ!

Apr 24, 2026 - 15:12
 0  3
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಮೂಲಭೂತ ಸೌಕರ್ಯ ಒದಗಿಸಲು ಡಿಜಿಪಿ ಆದೇಶ!

      ಬೆಂಗಳೂರು: ಮಾ 24, ರಾಜ್ಯದಲ್ಲಿ ಸಂಚಾರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳ ಕರ್ತವ್ಯದ ಸ್ಥಳಗಳಲ್ಲಿ  ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ತಾತ್ಕಾಲಿಕ ನೆರಳಿನ ವ್ಯವಸ್ಥೆ ಹಾಗೂ ಮಾಸ್ಕ್, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಡಿಜಿಪಿ ಅವರಿಗೆ ಪತ್ರ ಬರೆದ ನಿಮಿತ್ಯ ಆದೇಶ ಹೊರಡಿಸಿದ್ದಾರೆ,

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ರಸ್ತೆ ನಿರ್ಮಾಣ, ಕುಡಿಯುವ ನೀರಿಗಾಗಿ ಪೈಪ್‌ಲೈನ್ ಸಂಪರ್ಕ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಂದ ಬೃಹತ್ ಮಟ್ಟದ ಮಣ್ಣಿನ ಧೂಳು ಬೆಂಗಳೂರು ನಗರದಲ್ಲಿ ಸಂಪೂರ್ಣವಾಗಿ ಅವರಿಸುತ್ತಿದ್ದು ರಾಜ್ಯದಲ್ಲಿಯೂ ಸಹ ಈ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಮನೆಗಳು, ರಸ್ತೆಗಳು ವಾಹನಗಳು ಧೂಳುಮಯವಾಗಿರುವ ಕಾರಣ ಉಸಿರಾಡಲು ಉತ್ತಮ ಗುಣಮಟ್ಟದ ಗಾಳಿ ಸಿಗದೆ ಡಸ್ಟ್ ಅಲರ್ಜಿಯಂತಹ ರೋಗಗಳು ಸೇರಿದಂತೆ ಶ್ವಾಸಕೋಶಕ್ಕೆ ಹಾನಿಯಾಗುತ್ತಿರುವ ಕಾರಣ ಸದರಿ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದ ಸಂಚಾರ ವಿಭಾಗದಲ್ಲಿ ವಾಹನ ತಪಾಸಣೆ ಮತ್ತು ಸಂಚಾರ ನಿಯಮಗಳ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ತ್ವರಿತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಗ್ನಲ್ ಮತ್ತು ಸ್ಥಳಗಳಲ್ಲಿ ಪ್ಯಾರಾಚೂಟ್ ಕೊಡೆಗಳನ್ನು ಮತ್ತು ವಾಯುಮಾಲಿನ್ಯದಿಂದ ರಕ್ಷಣೆ ಪಡೆಯುವ ಸಲುವಾಗಿ ಮಾಸ್ಕ್ ಗಳನ್ನು ದೇಹ ನಿರ್ಜಲೀಕರಣವಾಗದಂತೆ ಕುಡಿಯುವ ನೀರು ಮತ್ತು ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್ ಪಿಸಿಎ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ಪತ್ರ ಬರೆದಿದ್ದರು.

ಪತ್ರದನ್ವಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದ ಸಂಚಾರ ವಿಭಾಗದಲ್ಲಿ ವಾಹನ ತಪಾಸಣೆ ಮತ್ತು ಸಂಚಾರ ನಿಯಮಗಳ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ತ್ವರಿತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿಗ್ನಲ್ ಮತ್ತು ಸ್ಥಳಗಳಲ್ಲಿ ಪ್ಯಾರಾಚೂಟ್ ಕೊಡೆಗಳನ್ನು ಮತ್ತು ವಾಯುಮಾಲಿನ್ಯದಿಂದ ರಕ್ಷಣೆ ಪಡೆಯುವ ಸಲುವಾಗಿ ಮಾಸ್ಕ್ ಗಳನ್ನು ದೇಹ ನಿರ್ಜಲೀಕರಣವಾಗದಂತೆ ಕುಡಿಯುವ ನೀರು ಮತ್ತು ಎಲೆಕ್ಟ್ರೋಲೈಟ್ ಪಾನೀಯಗಳನ್ನು  
ನೀಡುವ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಪ್ರಧಾನ ಕಚೇರಿಯ ಪೊಲೀಸ್ ಉಪ ಮಹಾನಿರೀಕ್ಷಕರು ಹಾಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಆಯುಕ್ತರಾದ ಕೆ.ಪರಶುರಾಮ್ ರವರು ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456