ಭಕ್ತಿಭಾವ ತುಂಬಿದ ಅನುಕೃಪ ಗಾಯನ 

Apr 30, 2026 - 13:57
 0  3
ಭಕ್ತಿಭಾವ ತುಂಬಿದ ಅನುಕೃಪ ಗಾಯನ 

    ಬೆಂಗಳೂರು: ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ವಜ್ರಕ್ಷೇತ್ರದಲ್ಲಿ ಜರುಗುತ್ತಿರುವ ಶ್ರೀ ನರಸಿಂಹ ಜಯಂತ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಅನುಕೃಪ ಪುರೋಹಿತ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ಹಾಗೂ ಅನ್ನಮಾಚಾರ್ಯರ ಕೀರ್ತನೆಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಹಾಡಿದರು. ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ಶ್ರೀ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಶ್ರೀ ಪ್ರಮಥ್ ವಿಠಲ್ ಸಾಥ್ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ|| ವಾದಿರಾಜಾಚಾರ್ ಮತ್ತು ಸಹ-ಅರ್ಚಕರಾದ ಶ್ರೀ ನರಹರಿ ಆಚಾರ್ ಕಲಾವಿದರಿಗೆ ಸ್ವಾಮಿಯ ಪ್ರಸಾದ ಮತ್ತು ಸರ್ಟಿಫಿಕೇಟ್ ನೀಡಿ ಆಶೀರ್ವದಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456