ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ: ಸಮಾಜ ಸೇವಕ ವಿ. ಮೋಹನ್ ಕೃಷ್ಣ
ಬೇತಮಂಗಲ: ಇಲ್ಲಿಗೆ ಸಮೀಪದ ಐಸಂದ್ರ ಮಿಟ್ಟೂರು ಗ್ರಾಮದಲ್ಲಿ ಬಡವ ಶ್ರೀನಿವಾಸ್ ವಾಸಿಸಲು ಸೂರು ಇಲ್ಲದೆ ಗುಡಿಸಿಲು ಹಾಕಿಕೊಂಡು ಜೀವನ ನಡೆಸುತ್ತಿದ್ದು ಸಮಾಜ ಸೇವಕ ಮೋಹನ್ ಕೃಷ್ಣ ಅವರ ಮನೆಗೆ ಭೇಟಿ ನೀಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಗ್ರಾಮದ ನಿವಾಸಿ ಶ್ರೀನಿವಾಸ್ ಮಾತನಾಡಿ, ನಮಗೆ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯಗಳು ದೊರೆಯುತ್ತಿಲ್ಲ ಮನೆ ಇಲ್ಲದೆ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ತೀರಾ ಕಡು ಬಡತನದಲ್ಲಿ ಜೀವನ ನಡೆಸುತ್ತಿದ್ದೇವೆ ಎಂದು ಸಮಾಜ ಸೇವಕ ಮೋಹನ್ ಕೃಷ್ಣ ಬಳಿ ಅಳಲು ತೋಡಿಕೊಂಡರು.
ಈ ವೇಳೆ ಸಮಾಜ ಸೇವಕ ವಿ. ಮೋಹನ್ ಕೃಷ್ಣ, ಮಾತನಾಡಿ, ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ನೀಡಬೇಕಾದ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ತಾಲ್ಲೂಕಿನ ಜನಪ್ರತಿನಿದಿನಗಳು ಯಾವುದೇ ರೀತಿಯ ಅಭಿವೃದ್ಧಿ ಮಾಡುತ್ತಿಲ್ಲ ಜೀವನ ನಡೆಸಲು ಕನಿಷ್ಠ ಮನೆ ನಿರ್ಮಿಸಿ ಕೊಡುತ್ತಿಲ್ಲ ಎಂದು ಆರೋಪಿಸಿದರು.
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮನೆ ಸೌಲಭ್ಯ ದೊರೆತಲ್ಲಿ ಸದ್ಬಳಕೆ ಮಾಡಿಕೊಳ್ಳಿ ಒಂದುವೇಳೆ ಸರ್ಕಾರದಿಂದ ಯಾವುದೇ ಸೌಲಭ್ಯ ದೊರೆಯದೆ ಇದ್ದಲ್ಲಿ ವೈಯಕ್ತಿಕವಾಗಿ ಮನೆ ನಿರ್ಮಿಸಿಕೊಡುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ್, ಮಂಜುನಾಥ್, ಪ್ರಸಾದ್, ರಾಜೇಶ್, ಕೃಷ್ಣಪ್ಪ ಬಾಬು ರೆಡ್ಡಿ, ನಾಗೇಶ್ ಗಂಗಿರೆಡ್ಡಿ, ಸೇರಿದಂತೆ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
