ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನದಿಂದ ವಜಾ ಗೊಳಿಸುವಂತೆ ಆಗ್ರಹಿಸಿ ತೇಜಸ್ವಿ ನಾಗಲಿಂಗಸ್ವಾಮಿ 

Mar 5, 2026 - 13:20
 0  3
ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನದಿಂದ ವಜಾ ಗೊಳಿಸುವಂತೆ ಆಗ್ರಹಿಸಿ ತೇಜಸ್ವಿ ನಾಗಲಿಂಗಸ್ವಾಮಿ 

     ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದರಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ_

ಮತ್ತು ಅವರನ್ನು ಮಹಿಳಾ ಆಯೋಗದ ಅಧ್ಯಕ್ಷೆ ಸ್ಥಾನದಿಂದ ವಜಾ ಗೊಳಿಸುವಂತೆ ಆಗ್ರಹಿಸಿ

ದಿನಾಂಕ 04/03/2026 ರಂದು ಸಂಜೆ 4:30 ಗಂಟೆಗೆ ಮೈಸೂರಿನ ಬಸವ ಪುತ್ಥಳಿ ಬಳಿ ವೀರಶೈವ ಲಿಂಗಾಯತ ಯುವ ವೇದಿಕೆ ಮತ್ತು ಮಹಿಳಾ ಘಟಕದ ವತಿಯಿಂದ ನಾಗಲಕ್ಷ್ಮಿ ಚೌದರಿ ಅವರ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ ಮಾಡಿ ವಿವಿಧ ಘೋಷಣೆಗಳನ್ನು ಕೂಗುತ್ತ  ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ವೀರಶೈವ ಮುಖಂಡ ಹಾಗೂ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್ ಲಿಂಗಾಯತ ಧರ್ಮದ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರು ಹಗುರವಾದ ಹೇಳಿಕೆಯನ್ನು ನೀಡಿದ್ದಾರೆ

 ನಿವು ಇಂದಿಗೂ ಬಸವತತ್ವ ವನ್ನು ಅನುಸರಿಸುತ್ತಾ ಬರುತ್ತಿದ್ದೇವೆ ಇದನ್ನು ಅರಿಯದೆ ಸಮುದಾಯದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದರು

 ನಂತರ ಮಾತನಾಡಿದ ವೀರಶೈವ ಲಿಂಗಾಯತ ಸಮುದಾಯದ ಯುವ ನಾಯಕ ತೇಜಸ್ವಿ ನಾಗಲಿಂಗಸ್ವಾಮಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಘಟನೆ ಯೊಂದನ್ನು ಉಲ್ಲೇಖಿಸಿ ವೀರಶೈವ ಲಿಂಗಾಯತ ಸಮುದಾಯದ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ

ಇವರ ಈ ಹೇಳಿಕೆ ಇಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ನೋವುಂಟಾಗಿದೆ ಜವಾಬ್ದಾರಿ ಸ್ಥಾನದಲ್ಲಿರುವವರು ತಮ್ಮ ಸ್ಥಾನಕ್ಕೆ ಗೌರವ ತರುವ ಹೇಳಿಕೆ ನೀಡಬೇಕು ಎಂದು ಹೇಳಿದರು

ಈ ಕೂಡಲೇ ರಾಜ್ಯ ಸರ್ಕಾರ ವೀರಶೈವ ಲಿಂಗಾಯತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಹಿತಿ ಆಯೋಗದ ಅಧ್ಯಕ್ಷರ ರಾಜೀನಾಮೆ ಪಡೆದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಮುಖಂಡರಾದ ವೀರಶೈವ ಮೂರ್ತಿ, ಪುಟ್ಟ ಬುದ್ಧಿ, ನವೀನ್, ನಂಜುಂಡಸ್ವಾಮಿ, ಸರ್ವಮಂಗಳ, ಮಣಿ, ನಾಗವೇಣಿ, ತ್ರೀವೇಣಿ, ಗೌರಮ್ಮ, ಜಿ, ಮಹದೇವಮ್ಮ, ನಿಲಾವೇಣಿ, ಕಮಲ, ಶಿಲ್ಪ, ಇನ್ನಿತರರಿದ್ದರು,

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456