ಮುನಿಕೃಷ್ಣ ಎಂಬುವವರ ಹೊಲದಲ್ಲಿ ತೆರೆದ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದ ನಾಯಿ ರಕ್ಷಣೆ

Mar 30, 2026 - 15:34
 0  9
ಮುನಿಕೃಷ್ಣ ಎಂಬುವವರ ಹೊಲದಲ್ಲಿ  ತೆರೆದ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದ ನಾಯಿ ರಕ್ಷಣೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಹೆಚ್.ಎಸ್.ವಾರ್ಡ್ ನಂ-22 ಬನ್ನಿಕುಪ್ಪೆ ಚಿಕ್ಕಬಳ್ಳಾಪುರದಲ್ಲಿ ಮುನಿಕೃಷ್ಣ ಎಂಬುವವರ ಹೊಲದಲ್ಲಿ ಅಂದಾಜು 30x30 ಅಡಿ ವಿಸ್ತಾರವಾದ 50 ಅಡಿ ಆಳದ ತೆರೆದ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ನಾಯಿಯೊಂದು ಕಾಲು ಜಾರಿ ಬಿದ್ದಿದ್ದು, ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆಯ ನಿಯಂತ್ರಣ ಕೊಠಡಿಗೆ ದೂರವಾಣಿಗೆ ಕರೆ ಮಾಡಿ ತಿಳಿಸಿದರು. ಕರೆ ಬಂದ ತಕ್ಷಣ ಜಲವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯವನ್ನು ಸುಮಾರು 50 ಅಡಿ ಆಳದ ಬಾವಿಯಲ್ಲಿ ಹಗ್ಗಗಳ ಹಾಗೂ ಜೋಳಿಗೆ ಭಲೇ ಸಹಾಯದಿಂದ ಸುಮಾರು 02:20 ಎರಡು ಗಂಟೆ ಇಪ್ಪತ್ತು ನಿಮಿಷಗಳ ಕಾಲ ಶ್ರಮವಹಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರುಗಳು ಜೋಳಿಗೆ ಭಲೇ ಹಗ್ಗಗಳ ಸಹಾಯದಿಂದ ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ   

ನಾಯಿಯನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ಬನ್ನಿಕುಪ್ಪೆ ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಗಳು 

ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ  

ನಾಯಿಯ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು. 

ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ಕರಿಯಣ್ಣ. ಎಸ್.ಕೆ.ರವರ ನೇತ್ರತ್ವದಲ್ಲಿ, ಹಾಲಸಿದ್ದ .ವಸಂತ. ಮೇತ್ರಿ. ಅಗ್ನಿಶಾಮಕ ಠಾಣಾಧಿಕಾರಿ, ರವೀಂದ್ರ. ಸಂಗಮ, ನಾಗಪ್ಪ. ಶಿವಾಪುರ, ಅನಿಲ. ಚೋಪಡೆ, ರಾಜು. ಮುರಕುಟ್ಟಿ, ಎಂ.ಸುರೇಶ್. ನಾಯಕ ಹಾಗೂ ಗಣೇಶ. ಬೀರಗೌಡ ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456