ಯುವಕರು ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸಿ: ಜೆಡಿಎಸ್ ಯುವ ಮುಖಂಡ ಪ್ರಕಾಶ್
ಕೆಜಿಎಫ್: ನಗರದ ಎಂ.ಎಲ್. ಬ್ಲಾಕ್‌ನಲ್ಲಿ ಹಮ್ಮಿಕೊಂಡಿದ್ದ ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-01 ಕ್ರಿಕೆಟ್ ಪಂದ್ಯಾವಳಿಯಲ್ಲಿ ಜೆಡಿಎಸ್ ಯುವ ಮುಖಂಡ ಹಾಗೂ ನಗರಸಭೆ ಅಭ್ಯರ್ಥಿ ಪ್ರಕಾಶ್ ಅವರು ಭಾಗವಹಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 5000 ನಗದು ಬಹುಮಾನವನ್ನು ವಿತರಿಸಿ ಮಾತನಾಡಿದರು, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಯುವಕರಲ್ಲಿ ಶಿಸ್ತು, ನಾಯಕತ್ವ ಗುಣ ಮತ್ತು ತಂಡದ ಮನೋಭಾವವನ್ನು ಬೆಳೆಸುತ್ತವೆ. ಇಂದಿನ ಯುವಕರು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುವ ಬದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಇಂತಹ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಅನೇಕ ಯುವ ಪ್ರತಿಭೆಗಳಿಗೆ ವೇದಿಕೆ ದೊರೆಯುತ್ತಿದೆ. ಕ್ರೀಡೆಯ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರು ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ರೀಡಾಭಿಮಾನಿಗಳು ತಂಡದ ಆಟಗಾರರು ಉಪಸ್ಥಿತರಿದ್ದರು.